ರಾಜ್ಯದಲ್ಲಿ ಹೆಚ್ಚಾಗಿದೆ ಬಿಸಿಲಿನ ಝಳ; ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಹೆಚ್ಚಳ

Temperature of Bengaluru increased
Highlights

ಬೇಸಿಗೆ ಆರಂಭವಾಗಿದೆ.  ಈಗಾಗಲೇ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ 2 ರಿಂದ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ.  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಟಿದೆ. 
ಬಳ್ಳಾರಿ ,ರಾಯಚೂರು, ಕಲಬುರ್ಗಿ ,ಯಾದಗಿರಿ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. 

ಬೆಂಗಳೂರು (ಮಾ.26):  ಬೇಸಿಗೆ ಆರಂಭವಾಗಿದೆ.  ಈಗಾಗಲೇ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ 2 ರಿಂದ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ.  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಟಿದೆ. 
ಬಳ್ಳಾರಿ ,ರಾಯಚೂರು, ಕಲಬುರ್ಗಿ ,ಯಾದಗಿರಿ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. 

ರಾಜಧಾನಿ ಬೆಂಗಳೂರಲ್ಲೂ  ಬಿಸಿಲ ಝಳ ಹೆಚ್ಚಾಗಿದೆ.  ಈಗಾಗಲೇ 35 ಡಿಗ್ರಿ ಸೆಲ್ಸಿಯಸ್ ತಲುಪಿದೆ.  ವಾಡಿಕೆಗಿಂತ  ಬೆಂಗಳೂರಲ್ಲಿ 2 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಪ್ರತಿವರ್ಷ ಮಾರ್ಚ್ ತಿಂಗಳಲ್ಲಿ  33 ಸೆಲ್ಸಿಯಸ್ ಉಷ್ಣಾಂಶ ಇರುತ್ತಿತ್ತು.   2017,1996 ರಲ್ಲಿ ಮಾರ್ಚ್ ತಿಂಗಳಲ್ಲಿ 37 ದಾಖಲಾಗಿದ್ದು ಈವರೆಗಿನ ದಾಖಲೆಯಾಗಿತ್ತು. 

ಮುಂಬೈ ನಗರ ಈಗಾಗಲೇ ಬಿಸಿಗಾಳಿ ತುತ್ತಾಗಿದೆ.  ಏಪ್ರಿಲ್ ಮೇ ತಿಂಗಳಲ್ಲಿ ಬಿಸಿಲ ಝಳ ಇನ್ನಷ್ಟು ಏರಿಕೆ ಆಗುವ ಸಾಧ್ಯತೆಯಿದೆ ಎಂದು ಸುವರ್ಣ ನ್ಯೂಸ್’ಗೆ  ರಾಜ್ಯ  ನೈಸರ್ಗಿಕ  ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರ ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ. 

loader