ಪ್ರತಿಭಟನೆ: ರಾಜ್ಯಸಭಾ ಮತದಾನ ತಾತ್ಕಾಲಿಕ ಸ್ಥಗಿತ

First Published 23, Mar 2018, 11:29 AM IST
Temporary Stop Rajya Sabha Voting
Highlights

ಚುನಾವಣಾಧಿಕಾರಿಗಳು ಕಾಂಗ್ರೆಸ್ ಏಜೆಂಟ್'ಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದು, ಮತದಾನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು(ಮಾ.23): ಕಾಂಗ್ರೆಸ್ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಶಾಸಕ ಬಾಬೂರಾವ್ ಚಿಂಚನಸೂರ್ ಅವರಿಗೆ ಮರು ಮತದಾನ ಮಾಡಲು ಅವಕಾಶ ಮಾಡಿಕೊಟ್ಟ ಕ್ರಮವನ್ನು ಪ್ರಶ್ನಿಸಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ಹೀಗಾಗಿ ರಾಜ್ಯಸಭಾ ಚುನಾವಣೆಯ ಮತದಾನ ತಾತ್ಕಾಲಿಕವಾಗಿ ಸ್ಥಗಿತವಾಗಿದೆ.

ರಾಜ್ಯಸಭಾ ಚುನಾವಣೆಯ ಮತದಾನದ ವೇಳೆ ಚಿಂಚನಸೂರ್ ಹಾಗೂ ಕಾಗೋಡು ತಿಮ್ಮಪ್ಪ ಕಾಂಗ್ರೆಸ್ ಅಭ್ಯರ್ಥಿಗಳ ಬದಲಿಗೆ ಬೇರೆ ಅಭ್ಯರ್ಥಿಯ ಹೆಸರಿಗೆ ಟಿಕ್ ಮಾಡಿದ್ದಾರೆ. ನಂತರ ಮತಗಟ್ಟೆ ಏಜೆಂಟ್'ಗಳು ತಿಳಿ ಹೇಳಿದ ಬಳಿಕ ಹೊಸ ಮತಪತ್ರ ಪಡೆದು ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ.

ಚುನಾವಣಾಧಿಕಾರಿಗಳು ಕಾಂಗ್ರೆಸ್ ಏಜೆಂಟ್'ಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದು, ಮತದಾನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

loader