ಇಂದು ದೇಶದಾದ್ಯಂತ ಗಣರಾಜ್ಯೋತ್ಸವದ ಸಂಭ್ರಮ. ಬೆಂಗಳೂರಿನಲ್ಲಿಂದು ವಿದ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ಹಾಕಿರುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.  

ಬೆಂಗಳೂರು (ಜ.26): ಇಂದು ದೇಶದಾದ್ಯಂತ ಗಣರಾಜ್ಯೋತ್ಸವದ ಸಂಭ್ರಮ. ಬೆಂಗಳೂರಿನಲ್ಲಿಂದು ವಿದ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ಹಾಕಿರುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.

ಗಣರಾಜ್ಯೋತ್ಸವಕ್ಕೆ ಬೆಂಗಳೂರಿನಲ್ಲಿ ಪಾಕಿಸ್ತಾನಿ ಉಗ್ರರು ಬೆದರಿಕೆ ಹಾಕಿದ್ದು, ನಾಲ್ವರು ಪಾಕ್ ಉಗ್ರರು ಬೆಂಗಳೂರಿನಲ್ಲಿ ಬೀಡು ಬಿಟ್ಟಿರುವ ಮಾಹಿತಿಯನ್ನು ಕೇಂದ್ರ ಗುಪ್ತ ದಳ ರಾಜ್ಯ ಡಿಜಿಪಿಗೆ ನೀಡಿದೆ. ಇದರ ಪ್ರತಿ ಸುವರ್ಣ ನ್ಯೂಸ್'ಗೆ ಲಭ್ಯವಾಗಿದೆ.

ಉಗ್ರರ ಬೆದರಿಕೆ ಹಿನ್ನಲೆಯಲ್ಲಿ ಇದೇ ಮೊದಲ ಭಾರಿಗೆ ಮಾಣಿಕ್ ಷಾ ಪರೇಡ್ ಮೈದಾನದ ಮೇಲೆ ಕಮಾಂಡ್ ಗರುಡ ಪಡೆ ಹದ್ದಿನ ಕಣ್ಣು ಇಟ್ಟಿದೆ. ಮೈದಾನದ ಹೊರಗೆ, ಒಳಗೆ ಬಿಗಿ ಭದ್ರತೆ ಒದಗಿಸಲಾಗಿದೆ.