ಮಾಲೆಗಾಂವ್ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಸಾಧ್ವಿ ಪ್ರಮುಖ ಆರೋಪಿ ಎಂದು ಎನ್’ಐಎ ಆರೋಪಪಟ್ಟಿ ಸಲ್ಲಿಸಿತ್ತು.

ಮುಂಬೈ (ಏ.25): 2008ರಲ್ಲಿ ಸಂಭವಿಸಿದ ಮಾಲೆಗಾಂವ್ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಭಯೋತ್ಪಾದಕಿ ಸಾಧ್ವಿ ಪ್ರಜ್ಞಾಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಾಧ್ವಿ ಪ್ರಜ್ಞಾಗೆ 5 ಲಕ್ಷ ರೂಪಾಯಿ ಬಾಂಡ್ ಶ್ಯೂರಿಟಿ ಮೇಲೆ ಹೈಕೋರ್ಟ್ ಜಾಮೀನು ನೀಡಿದೆ. ಮಾಲೆಗಾಂವ್ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಸಾಧ್ವಿ ಪ್ರಮುಖ ಆರೋಪಿ ಎಂದು ಎನ್’ಐಎ ಆರೋಪಪಟ್ಟಿ ಸಲ್ಲಿಸಿತ್ತು.

ಆದರೆ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಕರ್ನಲ್ ಪುರೋಹಿತ್ ಕಳೆದ ವರ್ಷ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದನು. ಮುಂಬೈ ಹೈಕೋರ್ಟ್​​ ಅದನ್ನು ತಿರಸ್ಕರಿಸಿದೆ.

2008ರಲ್ಲಿ ಸಂಭವಿಸಿದ್ದ ಮಾಲೆಗಾಂವ್ ಸ್ಫೋಟದಲ್ಲಿ 7 ಮಂದಿ ಸಾವನ್ನಪ್ಪಿದ್ದರು.