ಶ್ರೀನಗರ(ಮೇ.18): ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಭಧ್ರತಾ ಪಡೆಗಳು ಮೂವರು ಹಿಜ್ಬುಲ್ ಉಗ್ರರನ್ನು ಹೊಡೆದುರುಳಿಸಿದೆ.

ಇದರಲ್ಲಿ ಭಾರತೀಯ ಸೇನೆಯ ಯೋಧ ಔರಂಗಜೇಬ್ ಹತ್ಯೆಯಲ್ಲಿ ಭಾಗಿಯಾಗಿದ್ದ ಓರ್ವ ಹಿಜ್ಬುಲ್ ಉಗ್ರನನ್ನೂ ಕೂಡ ಸದೆಬಡಿಯಲಾಗಿದೆ ಎಂದು ಸೇನೆ ಮಾಹಿತಿ ನೀಡಿದೆ.

ಎನ್‌ಕೌಂಟರ್‌ನಲ್ಲಿ ಹತರಾದವರನ್ನು ಶೌಕತ್ ದಾರ್, ಇರ್ಫಾನ್ ವಾರ್ ಮತ್ತು ಮುಜಾಫರ್ ಶೇಖ್ ಎಂದು ಗುರುತಿಸಲಾಗಿದ್ದು, ಇದರಲ್ಲಿ ಶೌಕತ್ ದಾರ್ ಎಂಬ ಉಗ್ರ ಔರಂಗಜೇಬ್ ಹತ್ಯೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.