ಕೇಂದ್ರದಲ್ಲಿ ಎನ್‌ಡಿಎ ಮತ್ತು ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕನಸು ನನಸು ಮಾಡಲು ನಿರ್ಧರಿಸಿರುವ ಹಿಂದೂ ಸಂಘಟನೆಗಳು, ಶೀಘ್ರವೇ ನಿರ್ಮಾಣ ಕಾರ್ಯ ಆರಂಭದ ಘೋಷಣೆ ಮಾಡಿವೆ. ಜೊತೆಗೆ ಇದೇ ವರ್ಷದ ನವೆಂಬರ್‌ನಲ್ಲಿ ಕರ್ನಾಟಕದ ಉಡುಪಿಯಲ್ಲಿ ನಡೆಯಲಿರುವ ‘ಧರ್ಮ ಸಂಸದ್‌'ನಲ್ಲಿ ನಿರ್ಮಾಣ ಕಾರ್ಯ ಆರಂಭದ ದಿನಾಂಕ ನಿಗದಿ ಮಾಡಲು ನಿರ್ಧರಿಸಿವೆ.

ನವದೆಹಲಿ(ಜೂ.27): ಕೇಂದ್ರದಲ್ಲಿ ಎನ್‌ಡಿಎ ಮತ್ತು ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕನಸು ನನಸು ಮಾಡಲು ನಿರ್ಧರಿಸಿರುವ ಹಿಂದೂ ಸಂಘಟನೆಗಳು, ಶೀಘ್ರವೇ ನಿರ್ಮಾಣ ಕಾರ್ಯ ಆರಂಭದ ಘೋಷಣೆ ಮಾಡಿವೆ. ಜೊತೆಗೆ ಇದೇ ವರ್ಷದ ನವೆಂಬರ್‌ನಲ್ಲಿ ಕರ್ನಾಟಕದ ಉಡುಪಿಯಲ್ಲಿ ನಡೆಯಲಿರುವ ‘ಧರ್ಮ ಸಂಸದ್‌'ನಲ್ಲಿ ನಿರ್ಮಾಣ ಕಾರ್ಯ ಆರಂಭದ ದಿನಾಂಕ ನಿಗದಿ ಮಾಡಲು ನಿರ್ಧರಿಸಿವೆ.

ಇದರೊಂದಿಗೆ ಕಳೆದೊಂ ದು ದಶಕದಿಂದ ಬಹುತೇಕ ಸ್ಥಗಿತಗೊಂಡಿದ್ದ ರಾಮಮಂದಿರ ನಿರ್ಮಾಣ ಆಂದೋಲನ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಜೊತೆಗೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದ್ದು, ಈ ವೇಳೆಯೇ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ತೆಗೆದುಕೊಂಡಿರುವ ಈ ನಿರ್ಧಾರ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯಲಿದೆ ಎಂಬ ಕುತೂಹಲ ಹುಟ್ಟುಹಾಕಿದೆ

ಉಡುಪಿಯಲ್ಲಿಮಹೂರ್ತ:

ಅಯೋಧ್ಯೆಯಲ್ಲಿ ರಾಮಮಂದಿರ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕರ್ನಾಟಕದ ಉಡುಪಿ ಯಲ್ಲಿ ಈ ವರ್ಷದ ನವೆಂಬರ್‌ನಲ್ಲಿ ನಡೆಯಲಿರುವ ‘ಧರ್ಮ ಸಂಸದ್‌'ನಲ್ಲಿ ಮಂದಿರ ನಿರ್ಮಾಣದ ದಿನಾಂಕ ನಿಗದಿಯಾಗಲಿದೆ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ ಹೇಳಿದ್ದಾರೆ. ಭಾನು ವಾರ ಸ್ವಕ್ಷೇತ್ರ ಉನ್ನಾವ್‌ನಲ್ಲಿರುವ ಸ್ವಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಇತ್ತೀಚಿನ ಕರ್ನಾಟಕ ಪ್ರವಾಸದ ಸಂದರ್ಭದಲ್ಲಿ ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದ್ದೆ. ರಾಮಮಂದಿರ ನಿರ್ಮಾಣ ಆಗಿಲ್ಲ ಎಂಬ ಕಳಂಕವನ್ನು ನಿವಾರಿಸಿದರೆ ಅದು ಉಭಯ ಸನ್ಯಾಸಿಗ ಳಿಗೂ ಹೆಮ್ಮೆಯ ವಿಚಾರವಾದೀತು ಎಂದು ಮಾತನಾಡಿಕೊಂಡೆವು' ಎಂದು ಹೇಳಿದರು. ನ.23ರಿಂದ 26ರವರೆಗೆ ಉಡುಪಿಯಲ್ಲಿ ಧರ್ಮ ಸಂಸದ್‌ ಆಯೋಜನೆಗೆ ಹಿಂದೂ ಸಂಘಟನೆಗಳು ನಿರ್ಧರಿ ಸಿದ್ದು, ಇದರಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾವಿರಾದು ಸಾಧು ಸಂತರು ಭಾಗವಹಿಸಲಿದ್ದಾರೆ.