ಬಂಧಿತರ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಬಗ್ಗೆ ಇತ್ತೀಚೆಗೆ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‌, ತಾನು ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅರ್ಜಿದಾರರು ಸೂಕ್ತ ಕೋರ್ಟ್‌ ಮುಂದೆ ಈ ಕುರಿತು ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು. 

ನವದೆಹಲಿ[ಅ.02]: ಭೀಮಾ ಕೋರೆಗಾಂವ್‌ ಹಿಂಸಾಚಾರ ಪ್ರಕರಣ ಸಂಬಂಧ ಗೃಹ ಬಂಧನದಲ್ಲಿದ್ದ ಐವರು ಎಡಪಂಥೀಯ ವಿಚಾರವಾದಿಗಳ ಪೈಕಿ ಒಬ್ಬರಾದ ಗೌತಮ್‌ ನವ್‌ಲಾಖಾ ಅವರನ್ನು ದೆಹಲಿ ಹೈಕೋರ್ಟ್‌ ಸೋಮವಾರ ಬಿಡುಗಡೆಗೊಳಿಸಿದೆ.

ಬಂಧಿತರ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಬಗ್ಗೆ ಇತ್ತೀಚೆಗೆ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‌, ತಾನು ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅರ್ಜಿದಾರರು ಸೂಕ್ತ ಕೋರ್ಟ್‌ ಮುಂದೆ ಈ ಕುರಿತು ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು. 

ಅದರಂತೆ ಗೌತಮ್‌ ದಿಲ್ಲಿ ಹೈಕೋರ್ಟ್‌ ಮೊರೆ ಹೋಗಿದ್ದರು. ಅವರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಗೌತಮ್‌ ಬಿಡುಗಡೆಗೆ ಆದೇಶ ಹೊರಡಿಸಿದೆ. ಆದರೆ, ಇನ್ನುಳಿದ ನಾಲ್ವರ ಗೃಹ ಬಂಧನದ ಅವಧಿ ಮುಂದುವರಿಯಲಿದೆ.