ದೆಹಲಿ(ಸೆ.20): ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ಸ್ಮಾರ್ಟ್ ಸಿಟಿಯ ಎರಡನೇ ಹಂತದ ಪಟ್ಟಿ ಬಿಡುಗಡೆಯಾಗಿದೆ. ಸ್ಮಾರ್ಟ್ ಸಿಟಿ 2ನೇ ಪಟ್ಟಿಯಲ್ಲಿ ಒಟ್ಟು 27 ನಗರಗಳು ಆಯ್ಕೆ ಮಾಡಲಾಗಿದೆ.

ಕೇಂದ್ರ ಸಚಿವ ವೆಂಕಯ್ಯನಾಯ್ಡು ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲಿ ರಾಜ್ಯದ 5 ನಗರಗಳು ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿವೆ. 

ರಾಜ್ಯದ ಹುಬ್ಬಳ್ಳಿ, ಧಾರವಾಡ, ತುಮಕೂರು, ಮಂಗಳೂರು,ಶಿವಮೊಗ್ಗ ನಗರಗಳು ಸ್ಮಾರ್ಟ್ ಸಿಟಿಯಾಗಲು ಆಯ್ಕೆಯಾಗಿದ್ದು, ಆಂಧ್ರಪ್ರದೇಶದ ತಿರುಪತಿ, ತಮಿಳುನಾಡಿನ ಮಧುರೈ ನಗರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.