ನಮಗೆ ಹೆಚ್ಚೆಂದರೆ ಮೂರು ತಲೆಮಾರು ನೆನಪಿರುತ್ತದೆ. ಅಂತಹದ್ದರಲ್ಲಿ 9 ಲಕ್ಷ ವರ್ಷಗಳ ಹಿಂದೆ ಹುಟ್ಟಿರುವ ವ್ಯಕ್ತಿಯ ಬಗ್ಗೆ ಮಾತನಾಡುತ್ತಾರೆ ಅಂದ್ರೆ ಅವರಿಗೆ ಏನು ಹೇಳಬೇಕು ಎಂದು ಅರ್ಥವಾಗ್ತಾಯಿಲ್ಲ ಎಂದು ಹೇಳಿದ್ದಾರೆ.

ಮಂಗಳೂರು(ಡಿ.06): ಹಿಂದುಗಳು ಪೂಜಿಸುವ ಶ್ರೀರಾಮ ಹುಟ್ಟಿರುವುದಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಸಿ.ಎಸ್ ದ್ವಾರಕ್'ನಾಥ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳೂರಿನ ಪುರಭವನದಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಇತಿಹಾಸದಲ್ಲಿ ಬುದ್ಧ, ಕ್ರಿಸ್ತ, ಪೈಗಂಬರ್ ಹುಟ್ಟಿರುವುದಕ್ಕೆ ಸಾಕ್ಷಿಯಿದೆ. ಆದರೆ ರಾಮನ ಕುರಿತು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.

ನಮಗೆ ಹೆಚ್ಚೆಂದರೆ ಮೂರು ತಲೆಮಾರು ನೆನಪಿರುತ್ತದೆ. ಅಂತಹದ್ದರಲ್ಲಿ 9 ಲಕ್ಷ ವರ್ಷಗಳ ಹಿಂದೆ ಹುಟ್ಟಿರುವ ವ್ಯಕ್ತಿಯ ಬಗ್ಗೆ ಮಾತನಾಡುತ್ತಾರೆ ಅಂದ್ರೆ ಅವರಿಗೆ ಏನು ಹೇಳಬೇಕು ಎಂದು ಅರ್ಥವಾಗ್ತಾಯಿಲ್ಲ ಎಂದು ಹೇಳಿದ್ದಾರೆ.

ದ್ವಾರಕ್'ನಾಥ್ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪರ-ವಿರೋದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.