ಇತಿಹಾಸದಲ್ಲಿ ಶ್ರೀರಾಮ ಹುಟ್ಟಿದ್ದಕ್ಕೆ ಯಾವುದೇ ಪುರಾವೆಗಳಿಲ್ಲವಂತೆ. ಈ ಮೂಲಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳೂರು (ಡಿ.05): ಇತಿಹಾಸದಲ್ಲಿ ಶ್ರೀರಾಮ ಹುಟ್ಟಿದ್ದಕ್ಕೆ ಯಾವುದೇ ಪುರಾವೆಗಳಿಲ್ಲವಂತೆ. ಈ ಮೂಲಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳೂರಿನ ಪುರಭವನದಲ್ಲಿ ನಡೆದ ‘ಬಾಬರಿ ಮಸೀದಿ ಧ್ವಂಸ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ದ್ವಾರಕನಾಥ್, ಇತಿಹಾಸದಲ್ಲಿ  ಬುದ್ಧ, ಕ್ರಿಸ್ತ, ಪೈಗಂಬರ್ ಇರುವಿಕೆಗೆ ಸಾಕಷ್ಟು ಪುರಾವೆಗಳಿವೆ. ಆದರೆ  ಶ್ರೀರಾಮ ಹುಟ್ಟಿರುವುದಕ್ಕೆ ಯಾವುದೇ ದಾಖಲೆಗಳು ಸಹ ಇಲ್ಲ  ಅಂತ ಹೇಳುವ ಮೂಲಕ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ವಿವಾದಕ್ಕೆ ಗ್ರಾಸವಾಗಿದ್ದಾರೆ.