ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿರುವುದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಡಿಸಿದ್ದಾರೆ. ಈ ಮಧ್ಯೆ ಸರ್ಕಾರದ ವಿರುದ್ಧ ನಾಳೆ ರಾಜ್ಯಪಾಲರಿಗೆ ಬಿಜೆಪಿ ದೂರು ಒಯ್ಯಲಿದೆ. ಈ ಮಧ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ.
ಬೆಂಗಳೂರು (ಆ.20): ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿರುವುದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಡಿಸಿದ್ದಾರೆ. ಈ ಮಧ್ಯೆ ಸರ್ಕಾರದ ವಿರುದ್ಧ ನಾಳೆ ರಾಜ್ಯಪಾಲರಿಗೆ ಬಿಜೆಪಿ ದೂರು ಒಯ್ಯಲಿದೆ. ಈ ಮಧ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ.
ಸರ್ಕಾರದಿಂದ ಎಸಿಬಿ ದುರ್ಬಳಕೆ ಆಗಿಲ್ಲವಂತೆ!
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶನ್ ಕುರಿತಾದ ಎಸಿಬಿ ಎಫ್ಐಆರ್ ಈಗಾಗಲೇ ರಾಜಕೀಯ ತಿರುವು ಪಡೆದುಕೊಂಡುಬಿಟ್ಟಿದೆ. ಕೆಎಎಸ್ ಅಧಿಕಾರಿ ಬಸವರಾಜೇಂದ್ರ ನೀಡಿರುವ ದೂರು ಆಧರಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿ ಸರ್ಕಾರದ ಜೊತೆ ನೇರ ಕುಸ್ತಿಗೆ ಇಳಿದಿದೆ. ಆದರೆ ಬಿಜೆಪಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯ ಸರ್ಕಾರದಿಂದ ಎಸಿಬಿ ದುರುಪಯೋಗವಾಗಿದೆ ಎಂಬ ಆರೋಪವನ್ನು ಖಡಾಖಂಡಿತವಾಗಿ ತಳ್ಳಿಹಾಕಿದ್ದಾರೆ. ಆದರೆ ಯಡಿಯೂರಪ್ಪ ಬೆನ್ನಿಗೆ ನಿಂತಿರುವ ಬಿಜೆಪಿ ಗಣಿ ಇಲಾಖೆ ಉಪ ಕಾರ್ಯದರ್ಶಿ ಬಸವರಾಜೇಂದ್ರ ನೀಡಿರುವ ದೂರನ್ನೇ ಆಧರಿಸಿ ಈಗ ರಾಜ್ಯಪಾಲರ ಬಳಿ ಹೊರಟಿದೆ. ನಾಳೆ ಬೆಳಗ್ಗೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಆಗ್ರಹಿಸಲಿದೆ.
ಈ ಮಧ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಯಡಿಯೂರಪ್ಪ ಮೌನ ಕಾಯ್ದುಕೊಂಡಿದ್ದು, ಅವರ ಬೆಂಬಲಿಗರಿಂದ ಮಾತ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು, ಟೀಕೆಗಳು ಮುಂದುವರಿಯುತ್ತಿವೆ. ಬಸವರಾಜೇಂದ್ರ ನೀಡಿರುವ ದೂರು ರಾಜ್ಯ ಸರ್ಕಾರದ ವಿರುದ್ಧದ ಹೋರಾಟಕ್ಕೆ ಬಿಜೆಪಿಗೆ ಬಲ ತುಂಬಿದ್ದು, ಸಾಧ್ಯವಾದಷ್ಟೂ ಲಾಭ ಪಡೆಯುವ ಉಮೇದಿನಲ್ಲಿ ಕಮಲ ಪಕ್ಷ ಇದೆ.
