ಪಿಎಫ್‌ಐ ನಿಷೇಧಿಸೋಲ್ಲ, ಅಪರಾಧ ಕೃತ್ಯಗಳಿಗೆ ಬಿಜೆಪಿ, ಆರ್‌ಎಸ್‌ಎಸ್ ಕಾರಣ: ವೇಣುಗೋಪಾಲ್

First Published 11, Jan 2018, 11:23 AM IST
There is no proposal of banning PFI says Venugopal
Highlights

ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಿಗೆ ಬಿಜೆಪಿ, ಆರ್‌ಎಸ್‌ಎಸ್ ಕಾರಣ. ಪಿಎಫ್‌ಐ ನಿಷೇಧಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್.

ವಿಜಯಪುರ: 'ಜನರನ್ನು ಕೋಮು ಆಧಾರದ ಮೇಲೆ ವಿಭಜಿಸಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರಯತ್ನಿಸುತ್ತಿವೆ. ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಅಪರಾಧಗಳಿಗೆ ಇವುಗಳೇ ಕಾರಣ,' ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆರೋಪಿಸಿದ್ದಾರೆ.

'ಅಪರಾಧಗಳು ಕೃತ್ಯಗಳಿಗೆ ಬಿಜೆಪಿ ಪ್ರಚೋದಿಸುತ್ತಿದೆ. ಆದರೆ, ರಾಜ್ಯದಲ್ಲಿ ಪಿಎಫ್ಐ ನಿಷೇಧಿಸುವ ಪ್ರಶ್ನೆಯೇ ಇಲ್ಲ. ಮೊದಲು ಬಿಜೆಪಿ ಕ್ರಿಮಿನಲ್ ರಾಜಕೀಯದಿಂದ ಹೊರ ಬರಲಿ,' ಎಂದಿದ್ದಾರೆ.

'ಕರ್ನಾಟಕದ ಜನತೆ ಜಾಣರಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೋಮು ವಿಭಜನೆಯ ತಂತ್ರವನ್ನು ಬಲ್ಲವರಾಗಿದ್ದಾರೆ. ಚುನಾವಣೆಯಲ್ಲಿ ಕನ್ನಡಿಗರು ಇಂಥವರಿಗೆ ಅವಕಾಶ ನೀಡುವುದಿಲ್ಲ. ಆರ್‌ಎಸ್‌ಎಸ್ ಅಷ್ಟೇ ಅಲ್ಲ, ಹಿಂದೂ ಮೂಲಭೂತವಾದಿಗಳಾಗಲಿ ಬೇರೆ ಯಾರೇ ಕೋಮವಾದಿಗಳಾದದರೂ ಅವರ ವಿರುದ್ಧ ಸರಕಾರ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ,' ಎಂದರು. 

ಕಾಂಗ್ರೆಸ್ ಗೆಲವು ನಿಶ್ಚಿತ:

ರಾಜ್ಯದಲ್ಲಿ ಬಿಜೆಪಿ ಜನರಲ್ಲಿ ಕೋಮುಭಾವನೆ ಕೆರಳಿಸಿ, ಅಧಿಕಾರಕ್ಕೆ ಬರಲು ಹವಣಿಸುತ್ತಿದೆ, ರಾಜ್ಯದ ಜನತೆಗೆ ಬರುವ ಚುನಾವಣೆಯಲ್ಲಿ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ, 
'ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಮತವಿಲ್ಲ. ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಲಿದೆ,' ಎಂದು ಹೇಳಿದರು. 

loader