ಸಚಿವ ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಬಿಎಸ್’ವೈ ನೇತೃತ್ವದಲ್ಲಿ ನಡೆಸಿದ ಪ್ರತಿಭಟನೆಗೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಜಾರ್ಜ್ ಏಕೆ ರಾಜಿನಾಮೆ ಕೊಡಬೇಕು? ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹೆಸರು ಕೇಳಿ ಬಂದಿಲ್ಲ. ಸುಪ್ರೀಂಕೋರ್ಟ್ ಸಿಐಡಿ ವರದಿಯನ್ನು ರದ್ದು ಮಾಡಿಲ್ಲ. ಹೀಗಾಗಿ ಜಾರ್ಜ್ ರಾಜಿನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದ್ದಾರೆ.

ಬೆಂಗಳೂರು (ಸೆ.16): ಸಚಿವ ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಬಿಎಸ್’ವೈ ನೇತೃತ್ವದಲ್ಲಿ ನಡೆಸಿದ ಪ್ರತಿಭಟನೆಗೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಜಾರ್ಜ್ ಏಕೆ ರಾಜಿನಾಮೆ ಕೊಡಬೇಕು? ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹೆಸರು ಕೇಳಿ ಬಂದಿಲ್ಲ. ಸುಪ್ರೀಂಕೋರ್ಟ್ ಸಿಐಡಿ ವರದಿಯನ್ನು ರದ್ದು ಮಾಡಿಲ್ಲ. ಹೀಗಾಗಿ ಜಾರ್ಜ್ ರಾಜಿನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದ್ದಾರೆ.

ಕೇಂದ್ರದ ಹಲವಾರು ಮಂತ್ರಿಗಳ ಮೇಲೆ ಸಿಬಿಐ ತನಿಖೆ ನಡೆಯುತ್ತಿದೆ. ಅವರ್ಯಾರು ರಾಜಿನಾಮೆ ನೀಡಿಲ್ಲ. ಹೀಗಿರುವಾಗ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ. ಇಷ್ಟಕ್ಕೂ ರಾಜಿನಾಮೆ ಕೇಳಲು ಬಿಜೆಪಿಯವರಿಗೆ ನೈತಿಕತೆ ಎಂಬುದು ಇದೆಯೇ? ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಯನ್ನು ಭೇಟಿ ಮಾಡಿ ಶುಭ ಕೋರಿದರು.