ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಬಸ್ ಪಾಸ್‌ಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ನೀಡುವುದಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ ಬಜೆಟ್‌ನಲ್ಲಿ ಘೋಷಿಸಿತ್ತು. ಆದರೆ, ಇದನ್ನು ಜಾರಿಗೊಳಿಸುವುದು ಸುಲಭವಲ್ಲವೆಂದು ಸಾರಿಗೆ ಸಚಿವ ತಮ್ಮಣ್ಣ ಸುಳಿವು ನೀಡಿದ್ದಾರೆ.

ಬೆಂಗಳೂರು (ಜು.13): ಎಲ್ಲ ವಿದ್ಯಾರ್ಥಿಗಳನ್ನು ಒಂದಾಗಿ ಕಾಣದೇ, ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಕಳೆದ ಸರಕಾರ ಉಚಿತ ಬಸ್ ಪಾಸ್ ನೀಡುತ್ತಿದೆ, ಎಂಬ ಆರೋಪವಿತ್ತು. ಈ ಬೆನ್ನಲ್ಲೇ ಸಿದ್ದರಾಮಯ್ಯ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದರು. ಆದರೆ, ಇದನ್ನು ಜಾರಿಗೊಳಿಸುವುದು ಅಸಾಧ್ಯವೆಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸುಳಿವು ನೀಡಿದ್ದಾರೆ. 

ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಯೋಜನೆಯನ್ನು ಅನುಷ್ಠಾನಗೊಳಿಸಲು ಹಣಕಾಸು ಅನುಮತಿ ಇನ್ನೂ ಸಿಕ್ಕಿಲ್ಲ. ಹೊಸ ಬಜೆಟ್‌ನಲ್ಲಿ ಮಂಡನೆ ಮಾಡುತ್ತೇವೆ, ಎಂದು ಸಚಿವರು ಹೇಳಿದ್ದಾರೆ. 

ಈ ಯೋಜನೆಯ ಸಾಧಕ ಬಾಧಕಗಳನ್ನು ನೋಡಿ ಚರ್ಚಿಸಿ, ಕ್ರಮ ಕೈಗೊಳ್ಳಲು ಸಾರಿಗೆ ನಿಗಮಗಳು 500 ಕೋಟಿ ರೂ. ನಷ್ಟದಲ್ಲಿದೆ. ಹೀಗಾಗಿ ಸರಕಾರದ ಅನುದಾನ ಅಗತ್ಯ ಇದೆ. ಇದಕ್ಕಾಗಿ ಒಟ್ಟು 629 ಕೋಟಿ ರು. ಅಗತ್ಯ ಇದೆ, ಎಂದಿದ್ದಾರೆ.

ಉಚಿತ ಬಸ್‌ಗಾಗಿ ಆಗ್ರಹಿಸಿದ ರಾಜ್ಯದ ವಿವಿಧೆಡೆ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದು, ಗ್ರಾಮೀಣ ಪ್ರದೇಶದ ಪ್ರತಿಯೊಂದೂ ಮಕ್ಕಳಿಗೂ ಬಸ್ ನೀಡಬೇಕೆಂದು ಆಗ್ರಹಿಸಲಾಗುತ್ತಿದೆ.