ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಂ ಜೈಲಿನಲ್ಲಿ ಏನು ಮಾಡುತ್ತಿದ್ದಾನೆ ಎಂಬುದರ ಬಗ್ಗೆ ಹಲವು ವದಂತಿಗಳು ಹಬ್ಬಿದ್ದವು

ರೋಹ್ತಕ್(ಸೆ.20): ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಂ ಜೈಲಿನಲ್ಲಿ ಏನು ಮಾಡುತ್ತಿದ್ದಾನೆ ಎಂಬುದರ ಬಗ್ಗೆ ಹಲವು ವದಂತಿಗಳು ಹಬ್ಬಿದ್ದವು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಂದು ಕಾಲದಲ್ಲಿ 700 ಎಕರೆಗೂ ವಿಶಾಲವಾದ ತನ್ನ ಕ್ಯಾಂಪಸ್‌'ನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ರಾಮ್ ರಹೀಂ ಈಗ ಸುನೇರಿಯಾ ಜೈಲಿನಲ್ಲಿ ತರಕಾರಿ ಬೆಳೆಯುತ್ತಿದ್ದಾನೆ. ದಿನದ ಎಂಟು ಗಂಟೆ ದುಡಿಯುತ್ತಿರುವ ಆತ, ಅದಕ್ಕಾಗಿ ದಿನಕ್ಕೆ 20 ರು. ಕೂಲಿ ಕೂಡ ಪಡೆಯುತ್ತಿದ್ದಾನೆ.

ರಾಮ್ ರಹೀಂ ಬೆಳೆಯುವ ತರಕಾರಿಯನ್ನು ಜೈಲಿನ ಸಿಬ್ಬಂದಿ ಮತ್ತು ಕೈದಿಗಳ ಊಟಕ್ಕೆ ಬಳಸಿಕೊಳ್ಳಲಾಗುತ್ತದೆ ಎನ್ನಲಾಗಿದೆ.