ಸಚಿವರು ರಾಜೀನಾಮೆ ಬೆದರಿಕೆ ಹಾಕಿಲ್ಲ : ರಾಯರೆಡ್ಡಿ

First Published 10, Mar 2018, 11:22 AM IST
This Ministers Not Talk About Resignation
Highlights

ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡುವಂತೆ ನ್ಯಾ. ನಾಗಮೋಹನದಾಸ ನೇತೃತ್ವದ ಸಮಿತಿಯ ಶಿಫಾರಸು ಅಂಗೀಕಾರ ಸಂಬಂಧ ಗುರು ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಸಚಿವರು ರಾಜೀನಾಮೆ ನೀಡುವ ಮಾತಾಡಿಲ್ಲ.

ಬೆಂಗಳೂರು: ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡುವಂತೆ ನ್ಯಾ. ನಾಗಮೋಹನದಾಸ ನೇತೃತ್ವದ ಸಮಿತಿಯ ಶಿಫಾರಸು ಅಂಗೀಕಾರ ಸಂಬಂಧ ಗುರು ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಸಚಿವರು ರಾಜೀನಾಮೆ ನೀಡುವ ಮಾತಾಡಿಲ್ಲ.

ಆದರೆ ತಾತ್ವಿಕ ವಿಚಾರದಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಯಿತು ಅಷ್ಟೇ ಎಂದು ಸಚಿವ ಬಸವರಾಜ ರಾಯರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. 

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಲ್ಪಸಂಖ್ಯಾತ ಮಾನ್ಯತೆ ಕುರಿತಂತೆ ಪರ ಹಾಗೂ ವಿರೋಧವಾಗಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಖಂಡ್ರೆ, ಎಂ.ಬಿ. ಪಾಟೀಲ್, ಶರಣಪ್ರಕಾಶ್ ಅವರಾಗಲಿ ರಾಜೀನಾಮೆ ನೀಡುವುದಾಗಿ ಹೇಳಿಲ್ಲ ಎಂದರು.

loader