ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ.

ಗಂಗಾವತಿ : ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ.

ಶ್ರೀರಾಮನ ಹೆಸರಿನಲ್ಲಿ ಕೊಲೆ ಮಾಡುತ್ತಾರೆ ಎನ್ನುವ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದ ಅನ್ಸಾರಿಗೆ ಭೂಗತ ಪಾತಕಿ ರವಿ ಪೂಜಾರಿ ಹೆಸರಿನಲ್ಲಿ ಬೆದರಿಕೆ ಒಡ್ಡಲಾಗಿದೆ.

ಹಿಂದೂಗಳ ಬಗ್ಗೆ ಇಂತಹ ಅವಹೇಳನಕಾರಿಯಾದ ಹೇಳಿಕೆಗಳನ್ನು ನೀಡಿದರೆ ಕೊಲೆ ಮಾಡುವುದಾಗಿ ಹೇಳಿದ್ದು, ಈ ಸಂಬಂಧ ಅನ್ಸಾರಿ ಬೆಂಬಲಿಗರು ಗಂಗಾವತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜ.30ರಂದು ರವಿ ಪೂಜಾರಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ ಎಂದು ಅನ್ಸಾರಿ ಬೆಂಬಲಿಗ ಶಿವಾನಂದ ಎಂಬುವವರು ದೂರು ನೀಡಿದ್ದಾರೆ.