ದಯಾನಂದ ಸ್ವಾಮೀಜಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವ್ಯ ಆಚಾರ್ಯ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಲಾಗುತ್ತಿದೆ. ಹನಿಟ್ರ್ಯಾಪ್ ವಿಚಾರದಲ್ಲಿ ಮುಂದುವರಿದರೆ ಇಡೀ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಒಡ್ಡಲಾಗಿದೆ
ಶಿವಮೊಗ್ಗ(ಡಿ.8) : ದಯಾನಂದ ಸ್ವಾಮೀಜಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವ್ಯ ಆಚಾರ್ಯ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಲಾಗುತ್ತಿದೆ. ಹನಿಟ್ರ್ಯಾಪ್ ವಿಚಾರದಲ್ಲಿ ಮುಂದುವರಿದರೆ ಇಡೀ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಒಡ್ಡಲಾಗಿದೆ. ಕಾವ್ಯ ಸಹೋದರ ಕೃಷ್ಣ ಎನ್ನುವವರ ಕಣ್ಣಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಲಾಗಿದೆ.
ನಿನ್ನೆ ರಾತ್ರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಶಿವರಾಜಪುರದಲ್ಲಿ ಕಾವ್ಯ ಸಹೋದರ ಕೃಷ್ಣ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಚಾಕುವಿಂದ ಇರಿದು ಆರೋಪಿಗಳು ಪರಾರಿಯಾಗಿದ್ದಾರೆ.
ದಯಾನಂದ ಸ್ವಾಮೀಜಿ ಜೊತೆಗೆ ಕಾಣಿಸಿಕೊಂಡಿದ್ದರು ಎನ್ನಲಾದ ಕಾವ್ಯ ಆಚಾರ್ಯ ಕುಟುಂಬಕ್ಕೆ ಇದೀಗ ಬೆದರಿಕೆಯನ್ನು ಒಡ್ಡಲಾಗಿದೆ.
