ರಾಯ್ಪುರ(ಸೆ.24): ಛತ್ತೀಸ್‌ಗಡದಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಮೂವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೊದಲ ಪ್ರಕರಣದಲ್ಲಿ ಬಸ್ತಾರ್‌ ವಲಯದ ಸಾಂಗ್ಯುವೆಲ್‌ ಅರಣ್ಯ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ಪಡೆ ಹಾಗೂ ನಕ್ಸಲೀಯರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲೀಯರನ್ನು ಗುಂಡಿಟ್ಟು ಸಾಯಿಸಲಾಗಿದೆ.

ಬಿಜಾಪುರ ಜಿಲ್ಲೆಯ ಗಡಿ ಪ್ರದೇಶವಾಗಿರುವ ರಂಗೇಯ ಎಂಬಲ್ಲಿ ನಡೆದ ಮತ್ತೊಂದು ಕಾಳಗದಲ್ಲಿ ಮತ್ತೊಬ್ಬ ನಕ್ಸಲೀಯನನ್ನು ಗುಂಡಿಟ್ಟು ಸಾಯಿಸಲಾಗಿದೆ. ಎರಡೂ ಸ್ಥಳಗಳಿಂದ 12 ರೈಫಲ್‌ಗಳು ಹಾಗೂ ಸ್ಫೋಟಕಗಳು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.