ಚಿಕ್ಕಮಗಳೂರು[ಏ.19]: ತವೇರಾ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಶಿವಪುರ ಢಾಬಾ ಸಮೀಪ ನಡೆದಿದೆ

ಗುರುವಾರ ರಾತ್ರಿ ಚಿಕ್ಕಮಗಳೂರಿನಲ್ಲಿ ನಡೆದ ಈ ಅಪಘಾತದಲ್ಲಿ ಮೃತಪಟ್ಟವರನ್ನು ಮುನಿರಾಜು 65,  ಜ್ಯೋತಿ 14 ಸುಬ್ಬಲಕ್ಷ್ಮಿ 60 ಎಂದು ಗುರುತಿಸಲಾಗಿದೆ. ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟ ಕ್ಕೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 206 ನಲ್ಲಿರುವ ಶಿವಪುರ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಆ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಮೃತರೆಲ್ಲಾ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಮೂಲದವರಾಗಿದ್ದು, ಬೀರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.