ಶಿಯಾ ಧಾರ್ಮಿಕ ಸ್ಥಳವಾದ ಇಮಾಂಬಾರ್ಗ್ ಸಮೀಪದ ಜುಮಾ ಬಜಾರ್ ಮಾರುಕಟ್ಟೆಯಲ್ಲಿ ಬೈಕ್‌ವೊಂದರಲ್ಲಿ ಸ್ಫೋಟಕವನ್ನು ಇರಿಸಲಾಗಿತ್ತು. ಚಳಿಗಾಲದ ಹಿನ್ನೆಲೆಯಲ್ಲಿ ಜನರು ಬೆಚ್ಚನೆಯ ಬಟ್ಟೆಗಳನ್ನು ಖರೀದಿಸುತ್ತಿದ್ದ ವೇಳೆ ಬಾಂಬ್ ಸ್ಫೋಟಿಸಿದೆ. ಸ್ಫೋಟದಲ್ಲಿ ಸಿಖ್ ಸಮುದಾಯದ ಮೂವರು ಸೇರಿ 32 ಮಂದಿ ಸಾವಿಗೀಡಾಗಿದ್ದಾರೆ.
ಪೇಶಾವರ[ನ.24]: ಪಾಕಿಸ್ತಾನದ ಖೈಬರ್ ಪಖ್ತೂನ್‌ಖ್ವಾ ಪ್ರಾಂತ್ಯದ ಜನನಿಬಿಡ ಮಾರುಕಟ್ಟೆಯಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ ಸಿಖ್ ಸಮುದಾಯದ ಮೂವರು ಸೇರಿ 32 ಮಂದಿ ಸಾವಿಗೀಡಾಗಿದ್ದು, 40 ಮಂದಿ ಗಾಯಗೊಂಡಿದ್ದಾರೆ.
ಶಿಯಾ ಧಾರ್ಮಿಕ ಸ್ಥಳವಾದ ಇಮಾಂಬಾರ್ಗ್ ಸಮೀಪದ ಜುಮಾ ಬಜಾರ್ ಮಾರುಕಟ್ಟೆಯಲ್ಲಿ ಬೈಕ್‌ವೊಂದರಲ್ಲಿ ಸ್ಫೋಟಕವನ್ನು ಇರಿಸಲಾಗಿತ್ತು. ಚಳಿಗಾಲದ ಹಿನ್ನೆಲೆಯಲ್ಲಿ ಜನರು ಬೆಚ್ಚನೆಯ ಬಟ್ಟೆಗಳನ್ನು ಖರೀದಿಸುತ್ತಿದ್ದ ವೇಳೆ ಬಾಂಬ್ ಸ್ಫೋಟಿಸಿದೆ. ರಿಮೋಟ್ ಕಂಟ್ರೋಲ್ ಬಳಸಿ ಬಾಂಬ್ ಸ್ಫೋಟಿಸಲಾಗಿದೆ.
ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಅಲ್ಪ ಸಂಖ್ಯಾತ ಶಿಯಾ ಪಂಗಡಕ್ಕೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
