ಮೂವರು ಉಗ್ರರು ಅವಿತಿರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ರೈಫಲ್ಸ್ ಯೋಧರು ನಿನ್ನೆ ರಾತ್ರಿ ಕಾರ್ಯಾಚರಣೆ  ಆರಂಭಿಸಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮಿರದ ಸಾಯಿಮು ತ್ರಾಲ್ ಸೆಕ್ಟರ್’ನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ಏರ್ಪಟ್ಟಿದೆ. ಮೂವರು ಉಗ್ರರು ಸೇನಾವ್ಯೂಹದೊಳಗೆ ಸಿಕ್ಕಿಹಾಕಿಕೊಂಡಿದ್ದಾರೆಂದು ಹೇಳಲಾಗಿದೆ.

ಮೂವರು ಉಗ್ರರು ಅವಿತಿರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ರೈಫಲ್ಸ್ ಯೋಧರು ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಉಗ್ರರು ಅವಿತಿರುವ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

(ಸಾಂದರ್ಭಿಕ ಚಿತ್ರ)