ಶತಾಬ್ದಿ  ರೈಲುಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಕಡಿಮೆ ಇರುವ ಹಿನ್ನೆಲೆಯಲ್ಲಿ  ಶೀಘ್ರದಲ್ಲೆ ದರ ಇಳಿಕೆ ಮಾಡಲು ರೈಲ್ವೆ ಇಲಾಖೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.  

ನವದೆಹಲಿ : ಶತಾಬ್ದಿ ರೈಲುಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೆ ದರ ಇಳಿಕೆ ಮಾಡಲು ರೈಲ್ವೆ ಇಲಾಖೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.

ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣಿಕರು ಶತಾಬ್ದಿ ಸೇವೆಯನ್ನು ಪಡೆದುಕೊಳ್ಳಲಿ ಎನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ಕಡಿಮೆ ದರವನ್ನು ಮಾಡುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತದೆ. ಇದರಿಂದ ಹೆಚ್ಚಿನ ಸೇವೆ ಒದಗಿಸಲು ಸಹಕಾರಿಯಾಗುತ್ತದೆ ಎನ್ನುವುದು ರೈಲ್ವೆ ಇಲಾಖೆಯ ಹೊಸ ಯೋಜನೆಯಾಗಿದೆ.