ನಗರದಾದ್ಯಂತ ಒಟ್ಟು 9422 ಪೊಲೀಸ್ ಸಿಬ್ಬಂದಿಗಳ ನಿಯೋಜಿಸಲಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಭದ್ರತೆ ನೀಡಲಾಗಿದೆ. ಈ ಬಾರಿ ನೀರಿನ ಬಾಟಲಿ, ಶಸ್ತ್ರಾಸ್ತಗಳನ್ನು ಒಳ ತರಲು ನಿಷೇಧಿಸಲಾಗಿದೆ

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಭದ್ರತೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲಾಗಿದ್ದು, ಮೈದಾನಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದೆ. ಮೈದಾನದಲ್ಲಿ 50 ಸಿಸಿ ಕ್ಯಾಮರಾ, ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಅಗತ್ಯವಿರುವಷ್ಟು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ 9 ಡಿಸಿಪಿ, 16 ಎಸಿಪಿ ಸೇರಿದಂತೆ ಒಟ್ಟು 1050 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇನ್ನು ನಗರದಾದ್ಯಂತ ಒಟ್ಟು 9422 ಪೊಲೀಸ್ ಸಿಬ್ಬಂದಿಗಳ ನಿಯೋಜಿಸಲಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಭದ್ರತೆ ನೀಡಲಾಗಿದೆ. ಈ ಬಾರಿ ನೀರಿನ ಬಾಟಲಿ, ಶಸ್ತ್ರಾಸ್ತಗಳನ್ನು ಒಳ ತರಲು ನಿಷೇಧಿಸಲಾಗಿದೆ ಅಂತ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದರು. ಪೊಲೀಸ್ ಆಯುಕ್ತ ಪ್ರವೀಣ್ ಸೂದ್, ಡಿಸಿ ಶಂಖರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.