ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಟಿಪ್ಪು ಜಯಂತಿ ಜಟಾಪಟಿ ತಡೆಯೋಕೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
ಬೆಂಗಳೂರು (ನ.08): ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಟಿಪ್ಪು ಜಯಂತಿ ಜಟಾಪಟಿ ತಡೆಯೋಕೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
ಟಿಪ್ಪು ಜಯಂತಿ ಮಾಡಿ. ಮೆರವಣಿಗೆ ಮಾಡಬೇಡಿ ಎಂದು ಬೆಂಗಳೂರು ನಗರದಲ್ಲಿ ಎಲ್ಲಾ ವಲಯದ ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ. 30 KSRP ತುಕಡಿ, 25 ಸಿಆರ್ ಬೆಟಲಿಯನ್, ಗರುಡ ಫೋರ್ಸ್ ನಿಯೋಜನೆ ಮಾಡಲಾಗಿದೆ. ಟಿಪ್ಪು ಜಯಂತಿ ದಿನ ಸೂಕ್ಷ ಪ್ರದೇಶಗಳಿಗೆ 144ಸೆಕ್ಷನ್ ಜಾರಿ ಮಾಡಲಾಗುತ್ತದೆ. ಟಿಪ್ಪು ಜಯಂತಿ ಆಚರಣೆ ಮಾಡುವವರು ಮೆರವಣಿಗೆ ಮಾಡುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಹೇಳಿದ್ದಾರೆ.
