ಬೆಂಗಳೂರು (ಸೆ. 20): ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಮಂಡ್ಯ ಸೇರಿದಂತೆ ಕಾವೇರಿ ಕೊಳ್ಳದ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಸಿಎಂ ನಿವಾಸದಲ್ಲೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಡಿಜಿ ಓಂ ಪ್ರಕಾಶ್ ರಾಜ್ಯದ ಜನವರಿಗೆ ಮನವಿ ಮಾಡಿದ್ದಾರೆ.

ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸುವಂತೆ ಎಲ್ಲಾ ಅಧಿಕಾರಿಗಳೂ ಸೂಚನೆ ನೀಡಿದ್ದಾರೆ.

ಒಂದು ವೇಳೆ ಸಾಮಾಜಿಕ ಜಾಲತಾಣದಲ್ಲಿ ಉದ್ವೇಗಗೊಳಿಸುವ, ಶಾಂತಿ ಕದಡುವ ಸಂದೇಶ ರವಾನಿಸಿದ್ದಲ್ಲಿ ಕಾನೂನು ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೇ ಕರ್ಪ್ಯೂ ಜಾರಿಗೂ ನಿರ್ದೇಶನ ನೀಡಿದ್ದಾರೆ.