ಬೆಂಗಳೂರು [ಜು.24]: ಬಿ.ಎಸ್‌.ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತವಾಗುತ್ತಿದ್ದಂತೆ ಸದಾಶಿವನಗರದ ಡಾಲ​ರ್‍ಸ್ ಕಾಲೋನಿ ನಿವಾಸಕ್ಕೆ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ.

ಯಡಿಯೂರಪ್ಪ ಅವರ ನಿವಾಸದ ಬಳಿ ಅಪಾರ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.

ಯಡಿಯೂರಪ್ಪ ಅವರ ಭೇಟಿಗೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಿ ಮನೆಯೊಳಗೆ ಬಿಡಲಾಗುತ್ತಿದೆ. ಅಲ್ಲದೆ, ಮನೆಯ ದ್ವಾರದಲ್ಲಿ ಲೋಹಶೋಧಕ ಯಂತ್ರವನ್ನು ಅಳವಡಿಸಲಾಗಿದೆ.