ಹೊಸಕೋಟೆ : ಟಿಪ್ಪರ್ ಒಂದು ಮನೆಗೆ ನುಗ್ಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾ ಘಟನೆ ಹೊಸಕೋಟೆ ತಾಲೂಕಿನ ಬೋಧನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ 207ರ ಚಿಕ್ಕತಿರುಪತಿ ಕಡೆಯಿಂದ ಬೆಂಗಳೂರಿಗೆ  ಎಮ್ ಸ್ಯಾಂಡ್  ಡಸ್ಟ್ ತುಂಬಿದ್ದ ಟಿಪ್ಪರ್ ಲಾರಿ ಮನೆಗೆ ನುಗ್ಗಿದ ಪರಿಣಾಮ 26 ವರ್ಷದ ರಘು, 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ.  

ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿದ್ದ ಮನೆಗೆ ನುಗ್ಗಿದೆ. ಈ ವೇಳೆ ಮನೆಯ ಛಾವಣಿ ಸಂಪೂರ್ಣ ಕುಸಿತವಾಗಿದ್ದು, ಮನೆ ಕುಸಿದ ಪರಿಣಾಮ ಮನೆಯಲ್ಲಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಅವಶೇಷಗಳ ಅಡಿ ಸಿಲುಕಿದ್ದ ಮೃತದೇಹಗಳನ್ನು ಕ್ರೇನ್ ಸಹಾಯದಿಂದ ತೆರವು ಕಾರ್ಯಾಚರಣೆ ಮಾಡಲಾಗಿದೆ.  ಸ್ಥಳಕ್ಕೆ ತಿರುಮಲ ಶೆಟ್ಟಿಹಳ್ಳಿ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.