ಟಿಪ್ಪು ಜಯಂತಿ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯಂದೆ ನೋಡಿಕೊಳ್ಳುವುದು ಸರ್ಕಾರಕ್ಕೆ ಮತ್ತು ಗೃಹ ಸಚಿವರಿಗೆ ದೊಡ್ಡ ಸವಾಲೇ ಸರಿ ಜೊತೆಗೆ ನೂತನ ಪೊಲೀಸ್ ಮಹಾನಿರ್ದೇಶಕಿಯಾಗಿ ನೇಮಕೊಂಡ ನೀಲಮಣಿ  ರಾಜು ಅವರಿಗೂ ನವೆಂಬರ್ 10 ಟಿಪ್ಪು ಜಯಂತಿಯಂದೂ ಇಲಾಖೆಯನ್ನು ನಿಭಾಯಿಸೋದು ಕೂಡ ದೊಡ್ಡ ಚಾಲೆಂಜ್ ಆಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬೆಂಗಳೂರು(ನ.10): ಟಿಪ್ಪು ಜಯಂತಿ ಆಚರಣೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಂದೆಡೆ ಕಾನೂನು ಸುವ್ಯವಸ್ಥೆಯ ಚಿಂತೆ, ಮತ್ತೊಂದೆಡೆ ಚುನಾವಣಾ ವರ್ಷ. ಈ ಎಲ್ಲ ಕಾರಣಗಳಿಂದ ಯಾವುದೇ ಗಲಭೆಯಾಗದಂತೆ ರಾಜ್ಯವ್ಯಾಪಿ ಕಟ್ಟೆಚ್ಚರ ವಹಿಸಲಾಗಿದೆ. ಬಿಜೆಪಿಯ ಯಾವುದೇ ಹೋರಾಟಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಯಾರೇ ಕಾನೂನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಸಚಿವ ರಾಮಲಿಂಗಾರೆಡ್ಡಿ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳದೇ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಎರಡು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ ರೆಡ್ಡಿ, ಟಿಪ್ಪು ಜಯಂತಿ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಹಿಸಿ ಅನ್ನೋ ಕಟ್ಟಪ್ಪಣೆಯನ್ನು ಇಲಾಖೆಗೆ ನೀಡಿದ್ದಾರೆ.

ಕೊಡಗು, ಚಿತ್ರದುರ್ಗ ಮತ್ತು ಮಂಗಳೂರಲ್ಲಿ ಟಿಪ್ಪು ಜಯಂತಿ ಆಚರಣೆ ದಿನ ಯಾವುದೇ ಅಹಿತಕರ ಘಟನೆ ನಡೆಯಂತೆ ಮುಂಜಾಗ್ರತ ಕ್ರಮಕೈಗೊಳ್ಳಲಾಗಿದ್ದು, ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಯಾರೇ ಕಾನೂನನ್ನು ಕೈಗೆತ್ತಿಕೊಂಡರೆ ಕಠಿಣ ಕ್ರಮ ತಗೆದುಕೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಟಿಪ್ಪು ಪರ ಅಥವಾ ವಿರೋಧದ ಯಾವುದೇ ರೀತಿಯ ಹೋರಾಟಕ್ಕೂ ಅವಕಾಶ ನೀಡದಿರಲು ಸರ್ಕಾರ ತೀರ್ಮಾನಿಸಿದೆ ಎಂದಿದ್ದಾರೆ.