ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯ ಉಳಿವಿಗಾಗಿ ಫ್ರೆಂಚ್‌ರಿಂದ ಹಣ ಪಡೆದು ಬ್ರಿಟಿಷರ ವಿರುದ್ಧ ಹೋರಾಡಿ ದ್ದಾನೆಯೇ ಹೊರತು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ ಎಂದು ಬಿಜೆಪಿ ಮುಖಂಡ, ರಾಜ್ಯ ಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ತಿಳಿಸಿದರು.
ಬೆಳಗಾವಿ: ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯ ಉಳಿವಿಗಾಗಿ ಫ್ರೆಂಚ್ರಿಂದ ಹಣ ಪಡೆದು ಬ್ರಿಟಿಷರ ವಿರುದ್ಧ ಹೋರಾಡಿ ದ್ದಾನೆಯೇ ಹೊರತು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ ಎಂದು ಬಿಜೆಪಿ ಮುಖಂಡ, ರಾಜ್ಯ ಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ತಿಳಿಸಿದರು.
ಪ್ರಬುದ್ಧ ಭಾರತ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಪನ್ಯಾಸದಲ್ಲಿ ಭಾರತದಲ್ಲಿ ಬೌದ್ಧಿಕ ಭಯೋತ್ಪಾದನೆ ಮತ್ತು ಬಲಪಂಥೀಯ ಧೋರಣೆ ವಿಷಯವಾಗಿ ಉಪನ್ಯಾಸ ನೀಡಿದರು.
ಟಿಪ್ಪು ಸುಲ್ತಾನ್ ಹಣಕ್ಕಾಗಿ ಸಮಯ ಸಾಧಕನಾಗಿ ಹೋರಾಟ ಮಾಡಿದ್ದಾನೆ. ಆತ ಸ್ವಾತಂತ್ರ್ಯ ಹೋರಾಟಗಾರ ಎಂಬುದು ಶುದ್ಧ ಸುಳ್ಳು ಎಂದರು.
ಹಿಂದೂ ಸಮುದಾಯದಲ್ಲಿ ಭಯೋತ್ಪಾದಕರಿದ್ದಾರೆ ಎಂಬ ಕಮಲ್ಹಾಸನ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವೊಂದು ಸಿನಿಮಾಗಳಲ್ಲಿ ನಟಿಸಿ ಅವಕಾಶ ಸಿಗದಿದ್ದಾಗ ಹಿಂದೂ ಭಯೋತ್ಪಾದನೆ, ಹಿಂದೂ ಭಯೋತ್ಪಾದಕರು ಎಂದೆಲ್ಲ ಹೇಳಿಕೆ ನೀಡುತ್ತಿದ್ದಾರೆ ಎಂದರು.
