Asianet Suvarna News Asianet Suvarna News

ಟಿಪ್ಪು ಜಯಂತಿ: ಪರ-ವಿರುದ್ಧದ ಮೆರವಣಿಗೆ ಇಲ್ಲ, ಅವಹೇಳನಕಾರಿ ಪೋಸ್ಟ್‌ಗೆ ಕಠಿಣ ಶಿಕ್ಷೆ

ಕಳೆದ ಎರಡು ಮೂರು ವರ್ಷಗಳಲ್ಲಿ ಟಿಪ್ಪು ಜಯಂತಿ ವೇಳೆ ಕೆಲ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕೆಲವು ಕ್ರಮ ತೆಗೆದುಕೊಳ್ಳಲಾಗಿದೆ.ಏನು ಆ ಕ್ರಮಗಳು? ಇಲ್ಲಿವೆ ನೋಡಿ.

Tipu Jayanti celebratet all processions, both for and against have been banned says Parameshwara
Author
Bengaluru, First Published Nov 5, 2018, 3:17 PM IST

ಬೆಂಗಳೂರು, [ನ.05]: ಎಂದಿನಂತೆ ಈ ಬಾರಿಯೂ ಟಿಪ್ಪು ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಆದರೆ, ಈ ಬಾರಿಯ ಆಚರಣೆಯಲ್ಲಿ ಹಲವು ಬದಲಾವಣೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ.

ಟಿಪ್ಪು ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಇಂದು [ಸೋಮವಾರ] ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಪರಮೇಶ್ವರ್​ ಸಭೆ ನಡೆಸಿದರು.

ನ.10ಕ್ಕೆ ಟಿಪ್ಪು ಜಯಂತಿ: ನಿರ್ಧಾರ ಪ್ರಕಟಿಸಿದ ಸರ್ಕಾರ

 ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್​, “ನ.10 ರಂದು ನಡೆಯಲಿರುವ ಟಿಪ್ಪುಜಯಂತಿ ಆಚರಣೆಯನ್ನು ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆ ದೃಷ್ಟಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದ ಬದಲು ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನ 2 ಗಂಟೆ ಒಳಗೆ ಆಚರಿಸಲಾಗುವುದು. 

ರಾಜ್ಯ ಸರಕಾರ ಕಳೆದ ಮೂರು ವರ್ಷದಿಂದ ಟಿಪ್ಪು ಜಯಂತಿ ಆಚರಿಸುತ್ತಾ ಬರುತ್ತಿದೆ. ಕೆಲವರು ಈ ಜಯಂತಿಗೆ ಭಂಗ ತರುವ ಹೇಳಿಕೆ ನೀಡುತ್ತಿರುವುದರಿಂದ ಇಷ್ಟೆಲ್ಲ ತೊಂದರೆಯಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಕಳೆದ ಎರಡು ಮೂರು ವರ್ಷಗಳಲ್ಲಿ ಟಿಪ್ಪು ಜಯಂತಿ ವೇಳೆ ಕೆಲ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕೆಲವು ಕ್ರಮ ತೆಗೆದುಕೊಳ್ಳಲಾಗಿದೆ.
1.  ಯಾವುದೇ ರೀತಿಯ ಮೆರವಣಿಗೆಗೆ ಅವಕಾಶ ಇಲ್ಲ.
2 ಸಭಾಂಗಣದಲ್ಲೇ (indoor) ಕಾರ್ಯಕ್ರಮ ನಡೆಯಬೇಕು.
3 ಕಾರ್ಯಕ್ರಮ ನಡೆಯುವ ಸ್ಥಳ ಹೊರತುಪಡಿಸಿ ಎಲ್ಲೂ ಬ್ಯಾನರ್ ಹಾಕುವಂತಿಲ್ಲ.
4 ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟಿಂಗ್ ಮಾಡುವಂತಿಲ್ಲ ಮಾಡಿದಲ್ಲಿ ಕಠಿಣ ಕ್ರಮ.
5. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ.

Follow Us:
Download App:
  • android
  • ios