ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದಿಂದ ಆಚರಿಸಲ್ಪಡುತ್ತಿರುವ ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಗೊಳಿಸಲಾಗುವುದು ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದಿಂದ ಆಚರಿಸಲ್ಪಡುತ್ತಿರುವ ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಗೊಳಿಸಲಾಗುವುದು ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ದೇಶಪಾಂಡೆ ನಗರದಲ್ಲಿ ಆಯೋಜಿಸಿದ್ದ ಲಕ್ಷ್ಮೀ ಸರಸ್ವತಿ ಪೂಜೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ನಮ್ಮದು ಯಾವಾಗಲೂ ವಿರೋಧವಿದೆ ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಇದೇ ಕೊನೆಯ ದೀಪಾವಳಿ ಆಚರಿಸಲಿದ್ದಾರೆ ಎಂದು ಭವಿಷ್ಯ ನುಡಿದರು
