ಅಶೋಕ್ ಖೇಣಿ ವಿರುದ್ಧ ಯಾರು ಸ್ಪರ್ಧೆ ಮಾಡುತ್ತಿದ್ದಾರೆ ಗೊತ್ತೆ ?

TJ Abraham Contest Against Ashok kheni
Highlights

ಒಂದು ವೇಳೆ ಜೆಡಿಎಸ್ ಅಥವಾ ಬಿಜೆಪಿ ತಮಗೆ ಟಿಕೆಟ್ ನೀಡಲು ನಿರಾಕರಿಸಿದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಖೇಣಿ ಅವರಿಗೆ ಸೆಡ್ಡು ಹೊಡೆಯುವುದಾಗಿ ಹೇಳಿದರು.

ಬೆಂಗಳೂರು: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ವಿರುದ್ಧ ಕಣಕ್ಕಿಳಿಯುವುದಾಗಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇಣಿ ವಿರುದ್ಧ ಕಣಕ್ಕಿಳಿಯುವ ಮೂಲಕ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದು ವರಿಸುವುದಾಗಿ ತಿಳಿಸಿದರು. ಟಿಕೆಟ್ ನೀಡುವಂತೆ ಜೆಡಿಎಸ್ ವರಿಷ್ಠರಾದ ದೇವೇಗೌಡ ಮತ್ತು ಕುಮಾರ ಸ್ವಾಮಿ ಅವರಿಗೆ ಪತ್ರ ಬರೆದಿದ್ದೇನೆ. ಅಲ್ಲದೆ, ಅಮಿತ್ ಷಾ ಅವರಿಗೂ ವಿನಂತಿಸಿಕೊಂಡಿದ್ದೇನೆ. ಒಂದು ವೇಳೆ ಜೆಡಿಎಸ್ ಅಥವಾ ಬಿಜೆಪಿ ತಮಗೆ ಟಿಕೆಟ್ ನೀಡಲು ನಿರಾಕರಿಸಿದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಖೇಣಿ ಅವರಿಗೆ ಸೆಡ್ಡು ಹೊಡೆಯುವುದಾಗಿ ಹೇಳಿದರು.

loader