ರಾಜ್ಯಪಾಲ ಕೆ.ಎನ್ ತ್ರಿಪಾಠಿ ಮುಖ್ಯಮಮತ್ರಿ ಮಮತಾ ಬ್ಯಾನರ್ಜಿಯನ್ನು ನಿಂದಿಸಿ ಬೆದರಿಕೆ ಹಾಕಿರುವುದನ್ನು ಟಿಎಂಸಿ ತೀವ್ರವಾಗಿ ಖಂಡಿಸಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್’ಗೆ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಪರಿಗಣಿಸಬೇಕೆಂದು ಕೇಳಿಕೊಂಡಿದ್ದಾರೆ.

ಕೋಲ್ಕತ್ತಾ (ಜು.05): ರಾಜ್ಯಪಾಲ ಕೆ.ಎನ್ ತ್ರಿಪಾಠಿ ಮುಖ್ಯಮಮತ್ರಿ ಮಮತಾ ಬ್ಯಾನರ್ಜಿಯನ್ನು ನಿಂದಿಸಿ ಬೆದರಿಕೆ ಹಾಕಿರುವುದನ್ನು ಟಿಎಂಸಿ ತೀವ್ರವಾಗಿ ಖಂಡಿಸಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್’ಗೆ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಪರಿಗಣಿಸಬೇಕೆಂದು ಕೇಳಿಕೊಂಡಿದ್ದಾರೆ.

ರಾಜ್ಯಪಾಲ ಕೆ.ಎನ್ ತ್ರಿಪಾಠಿ ಸಾಂವಿಧಾನಿಕ ಮಿತಿಯನ್ನು ದಾಟಿ ನಮ್ಮ ಮುಖ್ಯಮಂತ್ರಿ ಜೊತೆ ಅನುಚಿತವಾಗಿ ವರ್ತಿಸಿದ್ದು ದುರಾದೃಷ್ಟ. ನಾವು ಇದನ್ನು ಸಹಿಸುವುದಿಲ್ಲ. ಇದರ ಬಗ್ಗೆ ಕೇಂದ್ರ ಗೃಹ ಸಚಿವರಿಂದ ಸಮಜಾಯಿಷಿ ಕೇಳಲು ಬಯಸುತ್ತೇವೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ರಾಷ್ಟ್ರಪತಿಯವರಿಗೆ ಕೇಳಿಕೊಂಡಿದ್ದೇವೆ. ತ್ರಿಪಾಠಿಯವರನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಸಬೇಕೆಂದು ಟಿಎಂಸಿ ಒತ್ತಾಯಿಸಿದೆ.

ಬಂಡೂರಿಯಾ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಸಶಸ್ತ್ರ ಪಡೆಯನ್ನು ಆಯೋಜಿಸಲಾಗಿದೆ. ಇಂಟರ್’ನೆಟ್ ಸೌಲಭ್ಯವನ್ನು ಕಡಿತಗೊಳಿಸಲಾಗಿದೆ. ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.