ನವದೆಹಲಿ[ಮೇ. 28]  ಮೇ 30 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹೋಗಲಿದ್ದೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 

ಪ್ರಧಾನಿ ಮೋದಿ ಅವರು ರಾಜಕೀಯ ಭಿನ್ನಾಭಿಪ್ರಾಯ  ಮರೆತು, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಿದ್ದರು. ಮಮತಾ ಮೋದಿ ಅವರ ಆಹ್ವಾನ ಸ್ವೀಕಾರ ಮಾಡಿದ್ದಾರೆ.

ದೀದಿಗೆ ಮೋದಿ ಏಟು, ಟಿಎಂಸಿ ತೊರೆದ ಇಬ್ಬರು ಶಾಸಕರು, 50 ಮುಖಂಡರು

ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುವ ಕುರಿತು ಇತರ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಮಮತಾ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳ ಪೈಕಿ ಇದೇ ಮೊದಲ ಸಾರಿ ಬಿಜೆಪಿ 18 ಸ್ಥಾನದಲ್ಲಿ ಜಯಗಳಿಸಿದೆ. ಕೇಂದ್ರದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಏರಲು ಸಿದ್ಧವಾಗಿದ್ದು ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.