ಜಯಲಲಿತಾ ಕ್ಷೇತ್ರ ಆರ್.ಕೆ.ನಗರದಿಂದ ಕಣಕ್ಕೆ

ಚೆನ್ನೈ: ಖ್ಯಾತ ನಟ ಕಮಲ್‌ಹಾಸನ್ ರಾಜಕೀಯ ಪ್ರವೇಶಿಸುವ ಬಗ್ಗೆ ಅಧಿಕೃತ ಘೋಷಣೆ ಮಾಡಿದ ಬೆನ್ನಲ್ಲೇ, ತಮಿಳಿನ ಮತ್ತೋರ್ವ ಖ್ಯಾತ ನಟ ವಿಶಾಲ್ ಕೂಡಾ ರಾಜಕೀಯ ಪ್ರವೇಶಕ್ಕೆ ನಿರ್ಧರಿಸಿದ್ದಾರೆ.

ಮಾಜಿ ಸಿಎಂ ಜಯಲಲಿತಾ ನಿಧನದಿಂದ ತೆರವಾದ ಆರ್.ಕೆ.ನಗರ ವಿಧಾನಸಭಾ ಕ್ಷೇತ್ರಕ್ಕೆ ಡಿ.21ರಂದು ಚುನಾವಣೆ ನಡೆಯಲಿದ್ದು, ಅದರಲ್ಲಿ ವಿಶಾಲ್ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಈ ಕುರಿತು ಅವರ ವಕ್ತಾರರು ಹೇಳಿಕೆ ನೀಡಿದ್ದಾರೆ. ವಿಶಾಲ್, ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ವಿಶಾಲ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದಾರೆ.