ಮಂತ್ರಿಮಾಲ್ ಮೆಟ್ರೋ ನಿಲ್ದಾಣದಿಂದ ಕೆಂಪೇಗೌಡ ಬಸ್ ನಿಲ್ದಾಣ, ಎಂ.ಜಿ.ರಸ್ತೆ ಬಸ್ ನಿಲ್ದಾಣಕ್ಕೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದಿಂದ ಪ್ರಯಾಣಿಕರ ಸಂಚಾರ ದಟ್ಟಣೆಗೆ ಅನುಗುಣವಾಗಿ ಹೆಚ್ಚಿನ ಬಸ್‌'ಗಳ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು(ಡಿ.31): ಬೆಂಗಳೂರು ಮಹಾನಗರ ಸಾರಿಗೆ ನಿಗಮವು (ಬಿಎಂಟಿಸಿ) ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗುವ ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31ರಂದು ಪ್ರಮುಖ ಮಾರ್ಗಗಳಲ್ಲಿ ತಡರಾತ್ರಿವರೆಗೂ ಬಸ್ ಸಂಚಾರ ಸೇವೆ ವಿಸ್ತರಿಸಿದೆ.

ಅಂದು ರಾತ್ರಿ 10.30ರಿಂದ ತಡರಾತ್ರಿ 2 ಗಂಟೆವರೆಗೂ ಬಸ್ ಸೇವೆ ಲಭ್ಯವಾಗಲಿದೆ. ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಕಾಡುಗೋಡಿ, ಸರ್ಜಾಪುರ, ಕೆಂಗೇರಿ ಹೌಸಿಂಗ್ ಬೋರ್ಡ್ ಕ್ವಾರ್ಟರ್ಸ್, ಜನಪ್ರಿಯ ಟೌನ್‌'ಶಿಪ್, ನೆಲಮಂಗಲ, ಯಲಹಂಕ ಉಪನಗರ, ಆರ್.ಕೆ. ಹೆಗಡೆ ನಗರ, ಬಾಗಲೂರು, ಹೊಸಕೋಟೆ ಹಾಗೂ ಬ್ರಿಗೇಡ್ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್‌ಗೆ ಬಸ್ ಸಂಚರಿಸಲಿವೆ.