ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು, ಮಹದಾಯಿ ಹೋರಾಟಗಾರರು ಪಕ್ಷಾತೀತ ಹೋರಾಟ ಮಾಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಮಹದಾಯಿ ಯೋಜನೆಗೆ ಗೋವಾ ಕಾಂಗ್ರೆಸ್ ಅಡ್ಡಿಪಡಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗದಗ(ಜ.03): ಇತ್ತೀಚೆಗೆ ಮಹದಾಯಿ ಹೋರಾಟಗಾರರು ಬಿಜೆಪಿ ಕಚೇರಿ ಬಳಿ ಹೋರಾಟ ಮಾಡಿರುವುದನ್ನು ಖಂಡಿಸಿ, ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್'ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು, ಮಹದಾಯಿ ಹೋರಾಟಗಾರರು ಪಕ್ಷಾತೀತ ಹೋರಾಟ ಮಾಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಮಹದಾಯಿ ಯೋಜನೆಗೆ ಗೋವಾ ಕಾಂಗ್ರೆಸ್ ಅಡ್ಡಿಪಡಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ನರಗುಂದ ಪಟ್ಟಣದ ಗಲ್ಲಿ ಗಲ್ಲಿಗಳಲ್ಲಿ ಬೆಂಕಿಯ ಕೆನ್ನಾಲಿಗೆ ಚಾಚಿದೆ. ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, 3 ಡಿವೈಎಸ್ಪಿ, 10 ಸಿಪಿಐ, 14 ಪಿಎಸ್'ಐ, 29 ಎಎಸ್'ಐ, 4 ಕೆಎಸ್ಆರ್'ಪಿ, 5 ಡಿಆರ್ ತುಕಡಿ, 120 ಪೊಲೀಸ್ ಹಾಗೂ 100 ಜನ ಹೋಂ ಗಾರ್ಡ್ ನೇಮಕಗಳನ್ನು ನಿಯೋಜಿಸಲಾಗಿದೆ.