ಪ್ರಸಿದ್ಧ ಸೀರಿಯಲ್ ನಟಿಯೋರ್ವರ ಮೃತದೇಹ ಸಿಲಿಗುರಿಯ ಹೋಟೆಲ್ ಕೊಠಡಿಯಲ್ಲಿ ಪತ್ತೆಯಾಗಿದೆ. ಸದ್ಯ ಇದೀಗ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. 

ಸಿಲಿಗುರಿ : ಬಂಗಾಳಿ ಪ್ರಸಿದ್ಧ ತಾರೆ ಪಾಯೆಲ್ ಚಕ್ರವರ್ತಿ ಅವರ ಮೃತದೇಹ ಸಿಲಿಗುರಿಯ ಹೋಟೆಲ್ ರೂಮ್ ನಲ್ಲಿ ಪತ್ತೆಯಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಮಂಗಳವಾರ ಸಿಲಿಗುರಿಯ ಇಲ್ಲಿನ ಚರ್ಚ್ ರಸ್ತೆಯಲ್ಲಿ ಇರುವ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. 

ಸಿಕ್ಕಿಂನ ಗ್ಯಾಂಗ್ ಟಕ್ ಗೆ ಹೋಗುವವರಿದ್ದರು ಎನ್ನಲಾಗಿದೆ. ಆದರೆ ಆಕೆ ಉಳಿದುಕೊಂಡಿದ್ದ ಕೊಠಡಿಯಲ್ಲಿ ಯಾವುದೇ ಚಟುವಟಿಕೆಗಳು ಕಂಡು ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು ಬಳಿಕ ಪರಿಶೀಲನೆ ನಡೆಸಲಾಗಿದೆ. 

ಈ ವೇಳೆ ಹೋಟೆಲ್ ಕೋಣೆಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ. ಆದರೆ ಅವರ ಸಾವಿಗೆ ಕಾರಣವೇನು ಎನ್ನುವುದು ಇನ್ನೂ ಕೂಡ ನಿಗೂಢವಾಗಿ ಉಳಿದಿದೆ. ಸದ್ಯ ಪೊಲೀಸರು ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. 

ಈ ಬಗ್ಗೆ ಮಾತನಾಡಿದ ಚಕ್ರವರ್ತಿ ತಂದೆ ಆಕೆ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಳು. ಈ ನಿಟ್ಟಿನಲ್ಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಹೇಳಿದ್ದು, ಸದ್ಯ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಪಾಯಲ್ ಅನೇಕ ಸೀರಿಯಲ್ ಗಳು ಹಾಗೂ ವೆಬ್ ಸಿರೀಸ್ ಗಳಲ್ಲಿ ನಟನೆ ಮಾಡಿದ್ದರು.