ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಭಾರತ- ಆಸ್ಟ್ರೇಲಿಯಾ ಪಂದ್ಯ ನಡೆಯಲಿದ್ದು ಸ್ಟೇಡಿಯಂ ಸುತ್ತಮುತ್ತ  ಬಿಗಿ ಭದ್ರತೆ ಒದಗಿಸಲಾಗಿದೆ.

ಬೆಂಗಳೂರು (ಸೆ.27): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಭಾರತ- ಆಸ್ಟ್ರೇಲಿಯಾ ಪಂದ್ಯ ನಡೆಯಲಿದ್ದು ಸ್ಟೇಡಿಯಂ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದೆ.

ನಾಳೆ ನಡೆಯಲಿರುವ ಭಾರತ ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

3 ಡಿಸಿಪಿ, 11 ಎಸಿಪಿ, 37 ಇನ್ಸ್ಪೆಕ್ಟರ್, 84 ಸಬ್ ಇನ್ಸ್ಪೆಕ್ಟರ್, 1500 ಪೇದೆಗಳು, 6 ಕೆಎಸ್ಆರ್ ಪಿ ಮತ್ತು ಡಿಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ ಗರುಡ ಫೋರ್ಸ್ ಬಳಕೆ ಮಾಡಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಹೇಳಿದ್ದಾರೆ.