ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ನವದೆಹಲಿ (ಅ.05): ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಇಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜೊತೆ ತುರ್ತು ಸಭೆ ನಡೆಸಿದ್ದಾರೆ. ಕೇರಳದಲ್ಲಿದ್ದ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಬೇಕಿದ್ದ ಅಮಿತ್ ಶಾ ಕೂಡಾ ಭೇಟಿಯನ್ನು ರದ್ದುಗೊಳಿಸಿ ತುರ್ತು ಸಭೆಯಲ್ಲಿ ಭಾಗಿಯಾಗಿದ್ದರು. ಕುಸಿಯುತ್ತಿರುವ ಆರ್ಥಿಕತೆಗೆ ಚೇತರಿಕೆ ಮತ್ತು ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಹಲವು ಜನಪರ ಘೋಷಣೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಇವತ್ತು ಜಿಎಸ್ಟಿಯ ಕೆಲವು ನಿಯಮಗಳನ್ನು ಸಡಿಲಗೊಳಿಸುವ ಬಗ್ಗೆ ಮತ್ತು ಇಂಧನ ಬೆಲೆಗಳನ್ನು ಇಳಿಸುವ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮುಖ್ಯವಾಗಿ ಜಿಎಸ್ಟಿಯಲ್ಲಿ ಸಣ್ಣ ವ್ಯಾಪಾರಿಗಳಿಗೆ ವಿನಾಯಿತಿ ನೀಡುವುದು. ಪ್ರತಿ ತಿಂಗಳು ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ತೆರಿಗೆ ಕಟ್ಟುವ ಬದಲು, 3 ತಿಂಗಳಿಗೊಮ್ಮೆ ಜಿಎಸ್ಟಿ ಸಲ್ಲಿಕೆಗೆ ಅವಕಾಶ ನೀಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ನಾಳೆ ಪ್ರಧಾನಿ ಘೋಷಣೆ ಮಾಡುವ ಸಾಧ್ಯತೆ ಇದೆ.
