ಅಯೋಧ್ಯೆ ವಿಚಾರಣೆ ಮಾಡಲ್ಲ ಎಂದ ನ್ಯಾ. ಉದಯ್ ಲಲಿತ್!

ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ(ಜ.09): ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ. ವಿಚಾರಣೆ ನಡೆಸುತ್ತಿದ್ದ ಪಂಚ ಸದಸ್ಯ ಪೀಠದಲ್ಲಿ ಉದಯ್ ಲಲಿತ್ ಅವರನ್ನು ಮುಂದುವರೆಸಲು ಮುಸ್ಲಿಂ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಮುಖವಾಗಿ ನ್ಯಾಯಮೂರ್ತಿ ಉದಯ್ ಲಲಿತ್ 1994ರಲ್ಲಿ ಇದೇ ಪ್ರಕರಣದಲ್ಲಿ ವಕೀಲರಾಗಿ ವಾದ ಮಂಡಿಸಿದ್ದರು. ಬಳಿಕ ನ್ಯಾಯಮೂರ್ತಿಳಾಗಿ ಆಯ್ಕೆಯಾಗಿ ಇದೀಗ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Related Video