ಗುಜರಾತ್ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಿಲ್ಕಿಸ್ ಬಾನೋ| ಬಿಲ್ಕಿಸ್ ಬಾನೊಗೆ 50 ಲಕ್ಷ ರೂ. ಪರಿಹಾರ, ಸರ್ಕಾರಿ ಉದ್ಯೋಗ ನೀಡುವಂತೆ ಸುಪ್ರೀಂ ಸೂಚನೆ| ಗುಜರಾತ್ ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಿದ ಸುಪ್ರೀಂಕೋರ್ಟ್| ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ದುರುಳರು|
ನವದೆಹಲಿ(ಏ.23): 2002ರ ಗುಜರಾತ್ ಗಲಭೆ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಿಲ್ಕಿಸ್ ಬಾನೊಗೆ, ಎರಡು ವಾರಗಳೊಳಗೆ 50 ಲಕ್ಷ ರೂ. ಪರಿಹಾರ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಬಿಲ್ಕಿಸ್ ಬಾನೊಳಿಗೆ 50 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ಹಾಗೂ ಮನೆ ಒದಗಿಸುವಂತೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ.
2002ರ ಮಾರ್ಚ್ ನಲ್ಲಿ ಗೋಧ್ರಾ ಗಲಭೆಯ ವೇಳೆ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೊ ಮೇಲೆ ರಾಧಿಕ್ ಪುರ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕುಟುಂಬದ 14 ಜನರನ್ನು ಹತ್ಯೆ ಮಾಡಲಾಗಿತ್ತು.
2008ರಲ್ಲಿ ಬಿಲ್ಕಿಸ್ ಬಾನೋ ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ, 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
