ಮಂಗಳೂರು [ಜು.31]: ಸೇತುವೆಯಿಂದ ನದಿಗೆ ಜಿಗಿದು ಮಾಜಿ ಸಿಎಂ ಅಳಿಯ ನೀರು ಪಾಲಾಗಿದ್ದಾರೆ ಎಂಬ ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನೇತ್ರಾವತಿ ಸೇತುವೆ ಮೇಲೆ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. 

ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಶೋಧ ಕಾರ್ಯಾಚರಣೆ ಆರಂಭಗೊಂಡಾಗ, ಕುತೂಹಲಗೊಂಡ ನಾಗರಿಕರು ಸೇತುವೆಯ ಇಕ್ಕೆಲಗಳಲ್ಲಿ ಜಮಾಯಿಸಿದರು. 

ಡಾ| ರಾಜ್‌ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಉದ್ಯಮಿ ಸಿದ್ಧಾರ್ಥ್ !

ಘಟನಾ ಸ್ಥಳದಲ್ಲಿ ಪೊಲೀಸ್‌ ಭದ್ರತೆ ಹಾಕಲಾಗಿತ್ತು. ನೇತ್ರಾವತಿ ಸೇತುವೆಯು ರಾಷ್ಟ್ರೀಯ ಹೆದ್ದಾರಿ 66, ಮಂಗಳೂರು-ಕೇರಳವನ್ನು ಸಂಪರ್ಕಿಸುವ ಹೆದ್ದಾರಿಯಾಗಿದೆ. ಆದ್ದರಿಂದ ಈ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಸಾಮಾನ್ಯ. ಸೇತುವೆ ಕೆಳಭಾಗದಲ್ಲಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದುದರಿಂದ ಜನಸಮೂಹ ಸೇರಿದ ಪರಿಣಾಮ ಸುಮಾರು ಒಂದೂವರೆ ಗಂಟೆ ಕಾಲ ಟ್ರಾಫಿಕ್‌ ಜಾಮ್‌ ಉಂಟಾಯಿತು. 

ಬಳಿಕ ಪೊಲೀಸರು ಹರಸಾಹಸಪಟ್ಟು ಜನತೆಯನ್ನು ಚದುರಿಸಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.