ಬೆಂಗಳೂರು :  ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ  ಸ್ವತಃ ಟ್ರಾಫಿಕ್ ಪೇದೆಯೇ ರಸ್ತೆ ಗುಂಡಿ ಮುಚ್ಚುವ ಕಾರ್ಯ ಮಾಡಿದ್ದಾರೆ.  ಅಶೋಕ್ ನಗರ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್  ಆಗಿರುವ ಸುರೇಶ್ ರಸ್ತೆ ಗುಂಡಿ ಮುಚ್ಚುವ ಮೂಲಕ ಸುದ್ದಿಯಾಗಿದ್ದಾರೆ.  

ಕಳೆದ ವಾರ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ವಿವೇಕ್ ನಗರದ 1ನೇ ಮೈನ್ ನಲ್ಲಿ ರಸ್ತೆ ಗುಂಡಿಗಳು ಮತ್ತೆ ಬಾಯಿ  ತೆರೆದಿದ್ದವು. ಈ ಹಿಂದೆ ಇಲ್ಲಿ ಗುಂಡಿಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ಮುಚ್ಚಿದ್ದು ಇದರಿಂದ ಮತ್ತೆ ರಸ್ತೆಯಲ್ಲಿ ಗುಂಡಿಗಳಾಗಿದ್ದವು.  

ರಸ್ತೆ ಗುಂಡಿಗಳಿಂದ ಸದಾ ಅಶೋಕನಗರ ಮಾರ್ಗವಾಗಿ ವಿವೇಕನಗರ, ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುವಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು.  ಈ ವೇಳೆ ಅದೇ ರಸ್ತೆ ಟ್ರಾಫಿಕ್ ನಿಯಂತ್ರಣಕ್ಕೆ ನಿಯುಕ್ತಿಗೊಂಡಿದ್ದ ಟ್ರಾಫಿಕ್ ಪೇದೆ ಸುರೇಶ್ ಟ್ರಾಫಿಕ್ ಜಾಮ್ ನಿಯಂತ್ರಿಸುವ ಸಲುವಾಗಿ ಸ್ವತಃ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಇಳಿದಿದ್ದಾರೆ. 

ಪೇದೆ ಸುರೇಶ್ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.