ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ದಲಿತರನ್ನು ಅಣ್ಣ-ತಮ್ಮಂದಿರಂತೆ ಕಾಣಬೇಕು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ದಲಿತರ ಮನೆಯಲ್ಲಿ ಊಟ ಮಾಡಬೇಕೆಂಬ ಅರಿವು ಮೂಡಿಸಲೆಂದೇ ಸ್ವತಃ ನಾನೇ ದಲಿತರ ಮನೆಗಳಿಗೆ ಭೇಟಿ ನೀಡಿ ಊಟ, ಉಪಾಹಾರ ಸೇವಿಸುತ್ತಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ಧಾರೆ.

ಶಿವಮೊಗ್ಗ: ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ದಲಿತರನ್ನು ಅಣ್ಣ-ತಮ್ಮಂದಿರಂತೆ ಕಾಣಬೇಕು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ದಲಿತರ ಮನೆಯಲ್ಲಿ ಊಟ ಮಾಡಬೇಕೆಂಬ ಅರಿವು ಮೂಡಿಸಲೆಂದೇ ಸ್ವತಃ ನಾನೇ ದಲಿತರ ಮನೆಗಳಿಗೆ ಭೇಟಿ ನೀಡಿ ಊಟ, ಉಪಾಹಾರ ಸೇವಿಸುತ್ತಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಸಿರಿಗೆರೆ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿ, ಪ್ರತಿ ಜಿಲ್ಲೆಯಲ್ಲೂ ಈ ರೀತಿಯ ಕಾರ್ಯಕ್ರಮಗಳು ಮುಗಿದ ನಂತರ ರಾಜ್ಯದ ಪ್ರತಿ ವಿಧಾನಸಭೆ ಕ್ಷೇತ್ರಗಳಿಗೆ ಹೋಗಿ ಅಲ್ಲೂ ದಲಿತರ ಕೇರಿ, ಮೊಹಲ್ಲಾಗಳಿಗೆ ಭೇಟಿ ನೀಡಲಿದ್ದೇನೆ. ದಲಿತರಿಗೆ ಒಳ್ಳೆಯ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಪ್ರಯತ್ನಿಸು ತ್ತಿದ್ದಾರೆ. ಹೀಗಾಗಿ ದಲಿತರ ಮನೆಗಳಿಗೆ ಭೇಟಿ ನೀಡಿ ಕಷ್ಟ ಆಲಿಸುವ ಕೆಲಸ ಮಾಡುತ್ತಿದ್ದೇನೆ. ಇದನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‌ಗೆ ಆಗುತ್ತಿಲ್ಲ ಎಂದರು.

ಇದಕ್ಕೂ ಮೊದಲು ಗ್ರಾಮದ ದಲಿತ ಸಮುದಾಯದ ಶ್ರೀನಿವಾಸ್‌ ಅವರ ಮನೆಯಲ್ಲಿ ಉಪಾಹಾರ ಸೇವಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸ ಅವರ ಹಿರಿಯ ಪುತ್ರ ಬೆಂಗಳೂರಿನಲ್ಲಿ ಪಿಎಚ್‌ಡಿ ಓದುತ್ತಿದ್ದು, ಅಂಥವರನ್ನು ಗುರುತಿಸಿ ರಾಜ್ಯ ಸರ್ಕಾರ ಸವಲತ್ತು ನೀಡಿದರೆ ಅವರ ಏಳಿಗೆ ಸಾಧ್ಯ ಎಂದರು.