ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ವಿದೇಶಾಂಗ ಕಾರ್ಯದರ್ಶಿ ಶಶಾಂಕ್, ಹಿರಿಯ ಪತ್ರಕರ್ತ ಕಾಂಚನ್ ಗುಪ್ತಾ, ರಕ್ಷಣಾ ತಜ್ಞ ಸುಶಾಂತ್ ಸರಿನ್, ನಿವೃತ್ತ ಸೇನಾಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದರು.
ನವದೆಹಲಿ (ನ.26): ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ನಲ್ಲಿ 26/11ರಲ್ಲಿ ಮಡಿದ ಯೋಧರನ್ನು ಸ್ಮರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ವಿದೇಶಾಂಗ ಕಾರ್ಯದರ್ಶಿ ಶಶಾಂಕ್, ಹಿರಿಯ ಪತ್ರಕರ್ತ ಕಾಂಚನ್ ಗುಪ್ತಾ, ರಕ್ಷಣಾ ತಜ್ಞ ಸುಶಾಂತ್ ಸರಿನ್, ನಿವೃತ್ತ ಸೇನಾಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದರು.
ಪಾಕಿಸ್ತಾನ ಭಯೋತ್ಪಾದನೆಯನ್ನು ಪೋಷಿಸುವ ರಾಷ್ಟ್ರ ಎಂಬ ವಿಷಯದ ಬಗ್ಗೆ ಚರ್ಚೆ ನಡೆಯಿತು. ಕಳೆದ ವಾರವಷ್ಟೇ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ ರಾಜ್ಯಸಭೆಯಲ್ಲಿ ಪಾಕಿಸ್ತಾನ ಭಯೋತ್ಪಾದನೆಯನ್ನು ಪೋಷಿಸುವ ರಾಷ್ಟ್ರ ಎಂಬ ಖಾಸಗಿ ವಿಧೇಯಕವನ್ನು ಮಂಡಿಸಿದ್ದರು.