ಕೋಲ್ಕತಾ [ಮೇ 18] :  ಪಶ್ಚಿಮ ಬಂಗಾಳದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ  ಟಿಎಂಸಿ ಭರ್ಜರಿ ಬಹುಮತ ಪಡೆದು ವಿಜಯಗಳಿಸಿದೆ.  ವಿರೋಧ ಪಕ್ಷವಾಗಿ 2ನೇ ಸ್ಥಾನಕ್ಕೆ ಬಿಜೆಪಿ ಆಯ್ಕೆಯಾಗಿದೆ. 

ಒಟ್ಟು 29,634 ಗ್ರಾಮ ಸಭಾ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಟಿಎಂಸಿ 26,601 ಸ್ಥಾನಗಳನ್ನು ಪಡೆಯುವ ಮೂಲಕ ಶೇ.89ರಷ್ಟು ಫಲಿತಾಂಶ ಪಡೆದುಕೊಂಡಿದೆ. 

ಇನ್ನು ಬಿಜೆಪಿ ಶೇ. 6.85ರಷ್ಟು ಸ್ಥಾನಗಳನ್ನು ಪಡೆದುಕೊಂಡಿದೆ. ಉಳಿದಂತೆ ಕಾಂಗ್ರೆಸ್ ಹಾಗೂ ಲೆಫ್ಟ್ ಪಾರ್ಟಿಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿ ಸ್ಥಾನ ಪಡೆದುಕೊಂಡಿದೆ. ಕಾಂಗ್ರೆಸ್ ಕೇವಲ 33 ಸ್ಥಾನಗಳಲ್ಲಿ ಜಯಗಳಿಸಿದೆ.  

ಮೇ 14 ರಂದು ಪಶ್ಚಿಮ ಬಂಗಾಳದಲ್ಲಿ ಗ್ರಾಮ ಪಂಚಾಯತ್ ಗಳಿಗೆ  ಚುನಾವಣೆ ನಡೆದಿದ್ದು, ಈ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಹಿಂಸಾಚಾರ ನಡೆದು 12 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದರು.