Asianet Suvarna News Asianet Suvarna News

ಉತ್ತರಾಖಂಡ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣವಚನ

ಪ್ರಧಾನಿ ಮೋದಿ,  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್. ಜತಗ್ ಪ್ರಕಾಶ್ ನಡ್ಡಾ ಹಾಗೂ ಉಮಾಭಾರತಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Trivendra Singh Rawat Takes Oath as CM of Uttarakhand

ಡೆಹ್ರಾಡೂನ್ (ಮಾ.18): ಉತ್ತರಾಖಂಡ ರಾಜ್ಯದ 9ನೇ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕೃಷ್ಣಕಾಂತ್ ಪೌಲ್ ರಾವತ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ರಾವರ್ ಜತೆ ಪ್ರಕಾಶ್ ಪಂತ್, ಮಸನ್ ಕೌಶಿಕ್, ಯಶ್ಪಾಲ್ ಆರ್ಯ, ಸುಬೋಧ್ ಉನಿಯಾಲ್ ಹಾಗೂ ರೇಖಾ ಆರ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಧಾನಿ ಮೋದಿ,  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್. ಜತಗ್ ಪ್ರಕಾಶ್ ನಡ್ಡಾ ಹಾಗೂ ಉಮಾಭಾರತಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಡೋಯಿವಾಲಾ ಕ್ಷೇತ್ರದಿಂದ ಶಾಸಕನಾಗಿರುವ ರಾವತ್, ಕಾಂಗ್ರೆಸ್ ಪ್ರತಿಸ್ಪರ್ಧಿಯನ್ನು 24 ಸಾವಿರ ವೋಟುಗಳ ಅಂತರದಿಂದ ಮಣಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ 56 ವರ್ಷ ಪ್ರಾಯದ ರಾವತ್, ಮೂರನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. 2007-12ರ ಅವಧಿಯಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಅಮಿತ್ ಶಾಗೆ ಆಪ್ತರಾಗಿರುವ ರಾವತ್ ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉತ್ತರ ಪ್ರದೇಶದ ಮೇಲುಸ್ತುವಾರಿ ಹೊಂದಿದ್ದರು. ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಜಯಭೇರಿ ಬಾರಿಸಿತ್ತು.

ಕಳೆದ ವಿಧಾನಸಭಾ ಚುನಾವಣೆಗಳಲ್ಲಿ 70 ಕ್ಷೇತ್ರಗಳ ಪೈಕಿ ಬಿಜೆಪಿಯು 57 ಸ್ಥಾನಗಳನ್ನು ಪಡೆದಿದೆ.

Follow Us:
Download App:
  • android
  • ios