ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಶ್ವೇತ ಭವನ ಹೇಳಿದೆ.
ನವದೆಹಲಿ (ಮಾ.28): ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಶ್ವೇತ ಭವನ ಹೇಳಿದೆ.
ಡೊನಾಲ್ಡ್ ಟ್ರಂಪ್ ಹಾಗೂ ಮೋದಿ ಎರಡು ಬಾರಿ ಫೋನಿನಲ್ಲಿ ಸಂಭಾಷಣೆ ನಡೆಸಿದ್ದಾರೆ. ಮೊದಲನೇ ಬಾರಿ ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ವಿರುದ್ಧ ಡೊನಾಲ್ಡ್ ಟ್ರಂಪ್ ಭಾರೀ ಗೆಲುವನ್ನು ಸಾಧಿಸಿದಾಗ ಪ್ರಧಾನಿ ಮೋದಿಯವರು ಕರೆ ಮಾಡಿ ಅಭಿನಂದಿಸಿದ್ದರು. ಒಂದು ತಾಸಿಗಿಂತಲೂ ಜಾಸ್ತಿ ಸಮಯ ಮಾತುಕತೆ ನಡೆಸಿದ್ದರು.
ಡೊನಾಲ್ಡ್ ಟ್ರಂಪ್ ಅಮೇರಿಕಾ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ 4 ದಿನಗಳ ಬಳಿಕ ಪ್ರಧಾನಿ ಮೋದಿಯವರಿಗೆ ಕರೆ ಮಾಡಿದ್ದರು. ಅಂತರಾಷ್ಟ್ರೀಯ ವ್ಯಾಪಾರ, ರಕ್ಷಣೆ ಮತ್ತು ಭಯೋತ್ಪಾದನೆ ಬಗ್ಗೆ ಚರ್ಚೆ ನಡೆಸಿದ್ದರು.
